ರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ :ಡಿ ಸಿ

ಚಿತ್ರದುರ್ಗ
     ಈ ಬಾರಿಯ  ಕನ್ನಡ ರಾಜ್ಯೋತ್ಸವವನ್ನು ನ.01 ರಂದು  ಜಿಲ್ಲಾ  ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ   ಕನ್ನಡ ರಾಜ್ಯೋತ್ಸವ ಆಚರಣೆ  ಸಿದ್ಧತಾ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
   
     ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 7-30 ಕ್ಕೆ  ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರ ಮೆರವಣಿಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾಗಿ, ಪ್ರಮುಖ ರಸ್ತೆ ಮೂಲಕ  ಪೋಲಿಸ್ ಕವಾಯತು ಮೈದಾನದವರೆಗೆ ಮೆರವಣಿಗೆ ನಡೆಯಲಿದೆ.  
     ಮೆರೆವಣಿಗೆಯಲ್ಲಿ ವಿವಿಧ ಪ್ರಕಾರಗಳ ಸಾಂಸ್ಕøತಿಕ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ.  ಮೆರವಣಿಗೆಯೊಂದಿಗೆ ಜಲ ಸಂರಕ್ಷಣೆ, ಮಹಿಳೆಯರ ಅಭಿವೃದ್ಧಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಬೆಸ್ಕಾಂ ಇಲಾಖೆಯಿಂದ ವಿದ್ಯುತ್ ಸುರಕ್ಷತೆ ಬಗ್ಗೆ  ಜಾಗೃತಿ ಬಿಂಬಿಸುವ   ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಲಿದೆ.
    ಬೆ. 9 ಗಂಟೆಗೆ ಪೋಲಿಸ್ ಕವಾಯತು ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸುವರು.   ಅಂದು ಸಂಜೆ ತ.ರಾ.ಸು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ವಿತರಣೆ ಮಾಡಬೇಕು.  ಗುಣಮಟ್ಟದ ಬಗ್ಗೆ ಪರಿಶೀಲಿಸಿದ ಬಳಿಕವೇ ಮಕ್ಕಳಿಗೆ ಸಿಹಿ ವಿತರಿಸಬೇಕು.  ಮೆರವಣಿಗೆಯ ವ್ಯವಸ್ಥೆ, ವೇದಿಕೆಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಯಿತು. 
     ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿರುವ ಹಾಗೂ ಸೇವೆ ಸಲ್ಲಿಸಿರುವವರನ್ನು ಗುರುತಿಸಿ, ಜಿಲ್ಲಾ ಮಟ್ಟದಲ್ಲಿ ಅವರನ್ನು ಸನ್ಮಾನಿಸಲು, ಪಟ್ಟಿ ಸಿದ್ಧಪಡಿಸಬೇಕು.  ಇದಕ್ಕಾಗಿ ಸಾಧನಾ ಕ್ಷೇತ್ರಗಳು ಹಾಗೂ ಮಾನದಂಡವನ್ನು ನಿಗದಿಪಡಿಸಿ, ಅರ್ಜಿ ಆಹ್ವಾನ ಮಾಡಬೇಕು.  ಅ. 25 ರೊಳಗೆ ಅರ್ಜಿ ಪಡೆದು, ಸ್ವಾಗತ ಮತ್ತು ಸನ್ಮಾನ ಸಮಿತಿಯಲ್ಲಿ ಸನ್ಮಾನಿತರ ಆಯ್ಕೆ ನಿರ್ಣಯ ಕೈಗೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.  
    ಅಲ್ಲದೆ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಹಣಕಾಸು ಸಮಿತಿ, ಸ್ವಾಗತ ಮತ್ತು ಸನ್ಮಾನ ಸಮಿತಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿಯನ್ನು ರಚಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ನಗರಸಭೆ ಪೌರಾಯುಕ್ತ ಹನುಮಂತರಾಜು, ಡಿಡಿಪಿಐ ರವಿಶಂಕರ ರೆಡ್ಡಿ, ಆಹಾರ ಇಲಾಖೆ ಉಪನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಕಸಾಪ ಜಿಲ್ಲಾ ಅಧ್ಯಕ್ಷ ಡಾ. ದೊಡ್ಡಮಲ್ಲಯ್ಯ, ಮೋಕ್ಷಾ ರುದ್ರಸ್ವಾಮಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.  .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link