ನ.29: ರೈತಸಂಘದಿಂದ ದೆಹಲಿ ಚಲೋ ಸಮಾವೇಶ

ಕುಣಿಗಲ್

       ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಮತ್ತು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನ.29 ರಂದು ದೆಹಲಿ ಚಲೋ ಮಹಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ರೈತಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಆನಂದ್ ಪಟೇಲ್ ತಿಳಿಸಿದರು.

        ಪಟ್ಟಣದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಗಂಭೀರ ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಉತ್ತರ ಪ್ರದೇಶದ ಫರಿದಾಬಾದ್‍ನಿಂದ ದೆಹಲಿಯ ರಾಮಲೀಲಾ ಮೈದಾನದವರೆಗೆ ರೈತ ಮುಕ್ತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

        ಇದರಲ್ಲಿ ದೇಶದ ಸುಮಾರು ಇನ್ನೂರಕ್ಕೂ ಹೆಚ್ಚು ರೈತ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು ಸೇರಿಕೊಂಡು ದೇಶದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಮತ್ತು ಆತ್ಮಹತ್ಯೆಗಳನ್ನು ತಡೆಗಟ್ಟಲು ಮತ್ತು ರೈತರ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಬೇಕು, ವಿಶೇಷ ಸಂದರ್ಭಗಳಲ್ಲಿ ಸಾಲ ಮನ್ನಾವನ್ನು ಖಾತ್ರಿಪಡಿಸುವ ಋಣಮುಕ್ತ ಕಾಯಿದೆಗಳನ್ನು ಕೂಡಲೇ ಸಂಸತ್‍ನಲ್ಲಿ ವಿಶೇಷ ಅಧಿವೇಶನವನ್ನು ಕರೆದು ಅಂಗೀಕಾರ ಮಾಡಬೇಕು, ಸಾಧ್ಯವಾಗದಿದ್ದರೆ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಧಿವೇಶನದಲ್ಲಿ ಅವಕಾಶ ಮಾಡಿಕೊಂಡು ಮುಖ್ಯವಾದ ರೈತರ ಸಮಸ್ಯೆಗಳನ್ನು ಚರ್ಚಿಸಿ ಮಸೂದೆಯನ್ನು ಅಂಗೀಕರಿಸಬೇಕೆಂದು ಇನ್ನೂ ಹತ್ತು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

         ಜಿಲ್ಲೆಯಿಂದ ಸುಮಾರು ಐನೂರಕ್ಕೂ ಹೆಚ್ಚು ರೈತರು ಬೆಂಗಳೂರಿನಿಂದ ವಿಶೇಷ ರೈಲಿನಲ್ಲಿ ದೆಹಲಿಗೆ ನ.27 ರಂದು ಪ್ರಯಾಣ ಬೆಳೆಸುತ್ತಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಚನ್ನತಿಮ್ಮನಪಾಳ್ಯ ವೆಂಕಟೇಶ್, ಕಸಬಾ ರೈತ ಸಂಘದ ಅಧ್ಯಕ್ಷ ದೇವರಾಜ್, ಲಕ್ಷ್ಮಣ್, ರಾಮಣ್ಣ, ಕೃಷ್ಣಪ್ಪ, ಇಬ್ರಾಹಿಂ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap