ಡೆಂಗ್ಯೂ ಜಾಗೃತಿ ಜಾಥಾಕ್ಕೆ ಸಿಇಒ ಹಸಿರು ನಿಶಾನೆ

ದಾವಣಗೆರೆ :

     ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಡಂಗ್ಯೂ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಹೆಚ್.ಬಸವರಾಜೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

       ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ವೈಧ್ಯಾಧಿಕಾರಿಗಳ ಸಂಘ ಇವುಗಳ ಸಹಯೋಗದಲ್ಲಿ ಆಯೋಜಿಸಿದ್ದ ಡೆಂಗ್ಯೂ ಜನ ಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮುಕ್ತಾಯವಾಯಿತು.

      ಜಾಥಾದ ಮೂಲಕ ಸೊಳ್ಳೆ ಮುಕ್ತ ಪರಿಸರಕ್ಕಾಗಿ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ, ನೀರಿನ ಪರಿಕರಗಳಲ್ಲಿ ಬಾಲಹುಳುಗಳಾಗದಂತೆ(ಲಾರ್ವಾ) ಎಚ್ಚರ ವಹಿಸಿ, ಡೆಂಗ್ಯೂ ನಿಯಂತ್ರಣಕ್ಕೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂಬ ಘೋಷಣೆಗಳ ಮೂಲಕ ಡೆಂಗ್ಯೂ ಮಹಾಮಾರಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತ್ರಿಪುಲಾಂಭ, ಜಿಲ್ಲಾ ವಿ.ಬಿ.ಡಿ.ಸಿ. ಅಧಿಕಾರಿ ಡಾ.ಮೀನಾಕ್ಷಿ, ಡಾ. ಸರೋಜಾ ಬಾಯಿ, ಡಾ.ರೇಣುಕಾರಾಧ್ಯ, ಕಚೇರಿ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link