ಬೆಂಗಳೂರು
ಮಳೆಗಾಲ ಆರಂಭವಾಗಿರುವ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಡೆಂಗ್ಯು ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ವಾರ್ಡುಗಳಲ್ಲೂ ಪಾಗಿಂಗ್ ಮತ್ತು ಔಷಧ ಸಿಂಪಡಿಸುವಂ ಗುತ್ತಿಗೆದಾರರು ಮತ್ತು ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಪೂರ್ವ ವಲಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕಸವಿಂಗಡಣೆ, ಪಿಓಪಿ ಗಣೇಶ ಮೂರ್ತಿ ಬದಲು ಮಣ್ಣಿನ ಗಣೇಶ ಮೂರ್ತಿ ಬಳಸುವ ಸಂಬಂಧ ಶಾಲಾ ಮುಖ್ಯಸ್ಥರು ಪಾಲಿಕೆ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಗರದ ಎಲ್ಲಾ ವಾರ್ಡ್ಗಳ ಸದಸ್ಯರ ಜೊತೆ ಸಭೆ ನಡೆಸಿ ಸೊಳ್ಳೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆಯೂ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಪರಿಸರ ಸಂರಕ್ಷಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದಾಗಲೇ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಲಿದೆ ಈ ಕುರಿತು ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಪೂರ್ವ ವಲಯದಲ್ಲಿ ಆ. 3 ರಂದು ಬಿಬಿಎಂಪಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಜಾಥಾದಲ್ಲಿ ಭಾಗವಹಿಸಿ, ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸಬೇಕೆಂದು ಮೇಯರ್ ಅವರು ತಿಳಿಸಿದರು.
ಬಿಬಿಎಂಪಿ ವತಿಯಿಂದ 8 ವಲಯಗಳಲ್ಲಿ ಇಂತಹ ಜಾಗೃತಿ ಜಾಥಾವನ್ನು ಆಯೋಜಿಸಲಾಗಿದೆ. ದಕ್ಷಿಣ ವಲಯದ ಎಲ್ಲ 44 ವಾರ್ಡ್ಗಳಲ್ಲಿ ಶಾಲಾ ಮಕ್ಕಳ ಸಹಯೋಗದೊಂದಿಗೆ ಈಗಾಗಲೇ ಯಶಸ್ವಿಯಾಗಿ ಜಾಥಾ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಕುಡಿಯುವ ಅಭಾವ ಹೆಚ್ಚುತ್ತಿದ್ದು ಸಾರ್ವಜನಿಕರಲ್ಲೂ ಅರಿವು ಮೂಡಿಸಬೇಕಿದೆ. ಉದ್ಯಾನವನ, ಹಿಂಗು ಗುಂಡಿ ನಿರ್ಮಾಣ ಮಾಡುವ ಬಗ್ಗೆಯ ಪಾಲಿಕೆ ಆಯುಕ್ತ ಜೊತೆ ಚರ್ಚಿಸಲಾಗಿದೆ. ವೈಟ್ ಟಾಪಿಂಗ್ ರಸ್ತೆಗಳಲ್ಲೂ ಹಿಂಗು ಗುಂಡಿಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಪೂರ್ವ ವಲಯದ ಜಂಟಿ ಆಯುಕ್ತ, ಉಪಆಯುಕ್ತೆ ಪಲ್ಲವಿ, ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪೂರ್ವ ವಲಯದ ಶಾಲಾ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








