ಬೆಳಗಾವಿ
ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಒಳಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ವಿ.ಸೋಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮಾಹಿತಿ ಸೋರಿಕೆಯಾಗಿರುವುದು ಮಾದ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ.ಈ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದರು.
ಮಾಹಿತಿ ಪೂರೈಸಿದರೆ ಸಮಗ್ರ ತನಿಖೆ ನಡೆಸುತ್ತೇವೆ.ವಿದ್ಯಾರ್ಥಿಗಳ ಮಾಹಿತಿಗಳ ರಹಸ್ಯವಾಗಿಡಬೇಕಾಗಿದೆ.ಆದರೆ ಇಂತಹ ಪ್ರಕರಣದಿಂದಾಗಿ ಬಡ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.ಆ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು .
ತಮಿಳುನಾಡಿನಲ್ಲಿ,ಆಂಧ್ರ ಪ್ರದೇಶದಲ್ಲಿ ಸ್ಥಳೀಯ ಭಾಷೆಗಳಲ್ಲಿ ನೀಟ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲೇ ನೀಟ್ ಪರೀಕ್ಷೆ ಬರೆಯುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಣೆ ನೀಡದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








