ಮಮತಾ ಬ್ಯಾನರ್ಜಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ದೇವೇಗೌಡರು ಸಹ ಭಾಗಿಯಾಗಲಿದ್ದಾರೆ…!!

ಬೆಂಗಳೂರು

        ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿರುವ ಪ್ರತಿಪಕ್ಷಗಳು ಕೋಲ್ಕತಾದಲ್ಲಿ ನಾಳೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ.

        ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಆಯೋಜಿಸಿರುವ ಈ ಬೃಹತ್ ಸಮಾವೇಶದಲ್ಲಿ ಬಿಜೆಪಿಯೇತರ ಪಕ್ಷಗಳು ಪಾಲ್ಗೊಳ್ಳಲಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಹ ಭಾಗವಹಿಸಲಿದ್ದಾರೆ.

      ದೇವೇಗೌಡರು ಈಗಾಗಲೇ ಕೋಲ್ಕತಾ ತಲುಪಿದ್ದು, ಅವರ ಪುತ್ರ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರೂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕಳೆದ ವರ್ಷ ಎಚ್.ಡಿ. ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು.

       ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶಕ್ಕೆ ಬೆಂಬಲ ಸೂಚಿಸಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಮಮತಾ ಬ್ಯಾನರ್ಜಿಯವರಿಗೆ ಪತ್ರ ಬರೆದಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link