ಖರ್ಗೆ ಸಿ.ಎಂ.ಮಾಡಲು ದೇವೇಗೌಡ ಸೂಚಿಸಿದ್ದರು:ಡಿಕೆಶಿ

ಶಿವಮೊಗ್ಗ;

        ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಮುನ್ನ ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಸೂಚಿಸಿದ್ದರು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.ಶಿವಮೊಗ್ಗದಲ್ಲಿ ಇಂದು ಆಯೋಜಿಸಿದ್ದ ಒಕ್ಕಲಿಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ದೇವೇಗೌಡರ ಅಣತಿಯಂತೆ ನಡೆಯದೇ ಹೆಚ್.ಡಿ.ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡುವಂತೆ ಒತ್ತಡ ಹಾಕಿ ಹೆಚ್‍ಡಿಕೆಯನ್ನೇ ಸಿ.ಎಂ.ಮಾಡಲಾಯಿತು.

         ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಕಣದಲ್ಲಿ ಮಧು ಬಂಗಾರಪ್ಪ ನಿಂತಿಲ್ಲ, ಬದಲಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆಂದು ತಿಳಿದು ಮತ ಹಾಕಿ ಎಂದು ಹೇಳಿದರು.

         ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮೈತ್ರಿ ಕುರಿತು ಏಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ತಿಳಿಸಿದ್ದಲ್ಲದೆ, ಕಾಂಗ್ರೆಸ್ 80 ಕ್ಷೇತ್ರಗಳಲ್ಲಿ ಗೆಲ್ಲಬಹುದೆಂದು ಕೂಡಾಚುನಾವಣೆಗೂ ಮುನ್ನ ಹೇಳಿದ್ದೆ ಎಂದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ತಪ್ಪಿನಿಂದಾಗಿ ಮತ್ತೇ ಚುನಾವಣೆ ಬಂದಿದೆ, ಇಂತಹರಿಗೆ ಜನರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link