ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ ಎಚ್.ಡಿ.ದೇವೇಗೌಡರು 3 ಲಕ್ಷ ಅಧಿಕ ಮತಗಳಿಂದ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಮ್ಮವೀರಣ್ಣಗೌಡ ತಿಳಿಸಿದರು.
ನಗರದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಿ ಮಾತನಾಡಿದ ಅವರು, ಮಹಿಳೆಯರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವಲ್ಲಿ ದೇವೇಗೌಡರ ಪಾತ್ರ ಅತಿ ಹೆಚ್ಚಾಗಿದೆ. ದೇವೇಗೌಡರ ಪರಿಶ್ರಮದಿಂದ ಇಂದು ಮಹಿಳೆಯರಿಗೆ ಉದ್ಯೋಗದಲ್ಲಿ 33 % ಮೀಸಲಾತಿ ದೊರೆತಿದೆ.
ಈ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ಮಹಿಳಾ ಘಟಕಗಳು ಒಗ್ಗಟ್ಟಾಗಿ ಪ್ರಚಾರ ಮಾಡುವ ಮೂಲಕ ಮಹಿಳೆಯರ ಮತಗಳು ದೇವೇಗೌಡರಿಗೆ ಹಾಕುವಂತೆ ಮನವಿ ಮಾಡಿ ದೇವೇಗೌಡರನ್ನು ಜಯಶೀಲರನ್ನಾಗಿಸಲಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್‍ನ ಮಹಿಳಾ ಘಟಕದ ಅಧ್ಯಕ್ಷೆ ಗೀತಾರುದ್ರೇಶ್ ಮಾತನಾಡಿ, ಮಾಜಿ ಪ್ರಧಾನಿಯಾದಂತಹ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಅವರ ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರೈತರು, ಬಡವರು ಹಾಗೂ ಮಹಿಳೆಯರ ಪರ ನಿಂತಿರುವ ದೇವೇಗೌಡರಿಂದ ತುಮಕೂರು ಜಿಲ್ಲೆ ಅಭಿವೃದ್ಧಿಯಾಗಲಿದೆ. ಅವರು ಕೇವಲ ತುಮಕೂರಿಗೆ ಮಾತ್ರ ಸೀಮಿತವಾಗದೆ ಇಡೀ ರಾಷ್ಟ್ರಕ್ಕೆ ಅವರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಅವರನ್ನು ಜಯಶೀಲರನ್ನಾಗಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮೈತ್ರಿ ಪಕ್ಷದ ಮುಖಂಡರಾದ ಲೀಲಾವತಿ, ಸುಜಾತ, ನಿಶಾ, ರೇಖಾ, ಮಂಗಳ, ನಾಗಮಣಿ, ತಾಹೆರಾಬಾನು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
