ಚಿಕ್ಕನಾಯಕನಹಳ್ಳಿ
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೆಗೌಡರು ಸ್ಪರ್ಧಿಸಿದ್ದು ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ತಾಲ್ಲೂಕಿನ ಶ್ಯಾವಿಗೆಹಳ್ಳಿಯ ಜಿ.ಎಂ.ಆರ್ ಕಲ್ಯಾಣ ಮಂಟಪದಲ್ಲಿ ಸಂಜೆ 4 ಘಂಟೆಗೆ ಸಭೆ ಏರ್ಪಡಿಸಿದ್ದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಭೆಗೆ ಆಗಮಿಸುವಂತೆ ಕಾಂಗ್ರೆಸ್ ಮುಖಂಡ ಸಂತೋಷ್ ಜಯಚಂದ್ರ ಮನವಿ ಮಾಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋಮುವಾದಿ ಬಿಜೆಪಿ ಪಕ್ಷವನ್ನು ದೂರವಿಡಲು ಎಲ್ಲಾ ಪಕ್ಷಗಳು ಒಂದು ಗೂಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ದೇವೆಗೌಡರು ಕಣಕ್ಕಿಳಿದಿದ್ದು, ಅವರ ಗೆಲುವು ಅಗತ್ಯವಾಗಿದೆ. ಹಾಗಾಗಿ ಏಪ್ರಿಲ್ 1 ರಂದು ನಡೆಯುವ ಸಭೆಗೆ ಎಲ್ಲಾ ಕಾರ್ಯಕರ್ತರು ಆಗಮಿಸಿ, ಸಲಹೆ-ಸೂಚನೆಗಳನ್ನು ಪಡೆಯಬೇಕೆಂದು ಮನವಿ ಮಾಡಿದರು.
ಮಾಜಿ ಶಾಸಕ ಬಿ.ಲಕ್ಕಪ್ಪ ಮಾತನಾಡಿ, ಎಲ್ಲಾ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಮ್ಮಲ್ಲಿರುವ ಭಿನ್ನಾಭಿಪ್ರಾಯ ಮರೆತು, ಮೈತ್ರಿ ಅಭ್ಯರ್ಥಿಯಾದ ಎಚ್.ಡಿ.ದೇವೆಗೌಡರನ್ನು ಬೆಂಬಲಿಸಿ ಗೆಲ್ಲಿಸುವಂತೆ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಡಿ.ಚಂದ್ರಶೇಖರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ಒಂದಾಗಿ ಕೋಮುವಾದಿ ಪಕ್ಷಗಳನ್ನು ದೂರವಿಡಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದೆ ಹಾಗೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಕೋಮು ಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಾಗಿದೆ. ಹಾಗಾಗಿ ಏಪ್ರಿಲ್ 1 ರಂದು ಸಂಜೆ 4 ಘಂಟೆಗೆ ಶ್ಯಾವಿಗೆಹಳ್ಳಿಯಲ್ಲಿ ಮೈತ್ರಿ ಸಭೆ ಏರ್ಪಡಿಸಲಾಗಿದೆ ಹಾಗೂ ಮಾರ್ಚ್ 31 ರಂದು ನೆಲಮಂಗಲಕ್ಕೆ ರಾಹುಲ್‍ಗಾಂಧಿರವರು ಬರುತ್ತಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬರುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಸದಸ್ಯ ವೈ.ಸಿ.ಸಿದ್ದರಾಮಯ್ಯ, ಮುಖಂಡರಾದ ಕೆ.ಜಿ.ಕೃಷ್ಣೆಗೌಡ, ಬ್ರಹ್ಮಾನಂದ, ಲಿಂಗದೇವರು, ಶಿವಕುಮಾರ್, ಜಾಕಿರ್, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.