ದೇವೇಂದ್ರಪ್ಪ ಗೆಲುವು ಖಚಿತ : ಜಗದೀಶ ಶೆಟ್ಟರ್.

ಹೊಸಪೇಟೆ :

     ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅತ್ಯಧಿಕ ಮತಗಳಿಂದ ಜಯ ಗಳಿಸಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

     ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿಯವರ ಅಲೆ ಸುನಾಮಿಯಂತೆ ಎದ್ದಿದೆ. ಈ ಸುನಾಮಿಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಕೊಚ್ಚಿ ಹೋಗಲಿವೆ. ಜನ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಉತ್ಸುಕರಾಗಿದ್ದಾರೆ ಎಂದರು.

    ಜೆಡಿಎಸ್ ಪಕ್ಷ ಅಪ್ಪ ಮಕ್ಕಳ ಪಕ್ಷವಾಗಿದೆ. ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಜೆಡಿಎಸ್ ಪಕ್ಷವನ್ನು ಈ ಬಾರಿ ಹಾಸನ, ತುಮಕೂರು ಹಾಗು ಮಂಡ್ಯದಲ್ಲಿ ಜನ ಕಿತ್ತೆಸೆಯಲಿದ್ದಾರೆ. ಸಿಎಂ ತಮ್ಮ ಮಗ ನಿಖಿಲ್‍ರನ್ನು ಗೆಲ್ಲಿಸುವುದಕ್ಕೋಸ್ಕರ ಸಾಕಷ್ಟು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಆದರೂ ಅವರು ಗೆಲ್ಲುವುದು ಕಷ್ಟ ಎಂದು ಭವಿಷ್ಯ ನುಡಿದರು.

     ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಸೋಲಿಸಲು ಮಹಾಘಟಬಂಧನ್ ರಚಿಸಿಕೊಂಡಿದ್ದಾರೆ. ಆದರೆ ಆ ಘಟಬಂಧನದಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದು ಗೊತ್ತಾಗುತ್ತಿಲ್ಲ. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್‍ನವರು ಮೈತ್ರಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರ ಮೇಲೆ ಒಬ್ಬರ ವಿಶ್ವಾಸವಿಲ್ಲ ಎಂದು ವ್ಯಂಗ್ಯವಾಡಿದರು.

     ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಚ್.ಆರ್.ಗವಿಯಪ್ಪ, ಮಾಜಿ ಎಂಎಲ್‍ಸಿ ಮೃತ್ಯುಂಜಯ ಜಿನಗಾ, ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಕಾರ್ಯದರ್ಶಿ ಮುರಾರಿಗೌಡ, ಶ್ರೀನಿವಾಸರೆಡ್ಡಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ, ಮಂಡಲ ಅಧ್ಯಕ್ಷ ಅನಂತ ಪಧ್ಮನಾಭ, ಬಸವರಾಜ ನಾಲತವಾಡ, ಮಾಧ್ಯಮ ಸಂಚಾಲಕ ಶಂಕರ ಮೇಟಿ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link