ಚಳ್ಳಕೆರೆ
ತಾಲ್ಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಶ್ರೀಗೌರಿದೇವಿ ಜಾತ್ರೆ ಯಶಸ್ಸಿಯಾಗಿ ನಡೆಯುತ್ತಿದ್ದು, ಕ್ಷೇತ್ರದ ಶಾಸಕ ಶ್ರೀರಾಮುಲು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ನಂತರ ಗ್ರಾಮದ ಹಲವಾರು ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿದ ಅವರು, ಸಾರ್ವಜನಿಕರಿಂದ ಮನವಿಯನ್ನು ಸ್ವೀಕರಿಸಿದರು. ಪ್ರತಿವರ್ಷವೂ ಸಹ ಗೌರವಿದೇವಿ ಜಾತ್ರೆ ವೈಭವದಿಂದ ನಡೆಯುತ್ತಿದ್ದು, ಈ ಜಾತ್ರೆಗೆ ಸುತ್ತಮುತ್ತ ಗ್ರಾಮದಿಂದ ಸಾವಿರಾರು ಸಂಖ್ಯೆಯ ಭಕ್ಯರು ಸೇರ್ಪಡೆಯಾಗಿ ದೇವಿ ಜಾತ್ರೆಯನ್ನು ಯಶಸ್ಸಿಯಾಗಿ, ಸಂಪ್ರದಾಯ ಬದ್ದವಾಗಿ ನಡೆಸುತ್ತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದರು.
ನಮ್ಮ ಸಂಸ್ಕತಿ ಮತ್ತು ಸಂಸ್ಕಾರವನ್ನು ಕಾಣಲು ನಾವು ಇಂದು ಗ್ರಾಮೀಣ ಭಾಗಗಳನ್ನು ಆಶ್ರಯಿಸಬೇಕಿದೆ. ಕಾರಣ, ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಎಲ್ಲಾ ಜಾತ್ರೆ, ಉತ್ಸವ ಹಾಗೂ ರಥೋತ್ಸವ ಕಾರ್ಯಕ್ರಮಗಳು ಮೂಲ ಸಂಪ್ರದಾಯಕ್ಕೆ ಹೆಚ್ಚು ಆದ್ಯತೆಯನ್ನು ನೀಡುತ್ತವೆ. ಇಂದಿಗೂ ಗ್ರಾಮದಲ್ಲಿ ನಡೆಯುವ ಬಹುತೇಕ ಎಲ್ಲಾ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ. ನಾನು ಸಹ ದೇವಿಯ ದರ್ಶನ ಪಡೆದು ಕ್ಷೇತ್ರದ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಟಿ.ಎಸ್.ಪುಟ್ಟಕ್ಕ ಸೇರಿದಂತೆ ಹಲವಾರು ಮುಖಂಡರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








