ಡ್ರಗ್ಸ್ ಪ್ರಕರಣ : ಮತ್ತೆ ಸಿಸಿಬಿ ಮುಂದೆ ವಿಚಾರಣಗೆ ಹಾಜರಾದ ದಿಗಂತ್

ಬೆಂಗಳೂರು:

     ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ ನಟ ದಿಗಂತ್ ಅವರು ಬುಧವಾರ ಮತ್ತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.ಇದೇ 16 ರಂದು ಪತ್ನಿ ಐಂದ್ರಿತಾ ಜತೆಯಲ್ಲಿ ಸಿಸಿಬಿ ವಿಚಾರಣೆ ಎದುರಿಸಿದ್ದ ದಿಗಂತ್, ಮತ್ತೆ ನೋಟಿಸ್ ಪಡೆದಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳ ವಿಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ.

     ನಿನ್ನೆಯೇ ವಾಟ್ಸಾಪ್ ಮೂಲಕ ನಟ ದಿಗಂತ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಆ ಬಳಿಕ ಇಬ್ಬರ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆದಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap