ತುಮಕೂರು:
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ ತುಮಕೂರು, ಅಖಿಲ ಭಾರತ ವೀರಶೈವ ಮಹಾಸಭಾ ತುಮಕೂರು ಜಿಲ್ಲಾ ಘಟಕ ಹಾಗೂ ಶ್ರೀ ಗುರುಸಿದ್ದೇಶ್ವರಸ್ವಾಮಿ ಸಹಕಾರ ಸಂಘ ತುಮಕೂರು ಇವರ ಸಹಯೋಗದಲ್ಲಿ ಡಿ.೩೧ ರಂದು ಜೆ.ಸಿ.ರಸ್ತೆಯಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಶ್ರೀ ಜಗದ್ಗುರು ಪೂಜಾ ಸಮಿತಿ ನಡೆಸುವ ಶ್ರೀ ೧೦೦೮ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಧನುರ್ಮಾಸ ಇಷ್ಠಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ ನಡೆಯಲಿದೆ. ಬೆಳಗ್ಗೆ ೫ ಗಂಟೆಗೆ ಸಾಮೂಹಿಕ ಶಿವಪೂಜೆ, ಸಂಜೆ ೬.೩೦ಕ್ಕೆ ಧಾರ್ಮಿಕ ಸಮಾರಂಭ ಜರುಗಲಿದೆ.
ಸಂಜೆ ೬.೩೦ ಗಂಟೆಗೆ ಧರ್ಮ ಜಾಗೃತಿ ಸಮಾರಂಭ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಶ್ರೀಮದ್ ಕಾಶಿಪೀಠದ ಶ್ರೀ ೧೦೦೮ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ವಹಿಸುವರು. ದಿವ್ಯ ಉಪಸ್ಥಿತಿಯಲ್ಲಿ ಶ್ರೀಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮಿಗಳು ಉಪಸ್ಥಿತರಿರುವರು. ಬೆಟ್ಟದಹಳ್ಳಿ ಮಠದ ಶ್ರೀ ಚಂದ್ರಶೇಖರ ಸ್ವಾಮಿಗಳು ಉಪದೇಶಾಮೃತ ನೀಡುವರು.
ಶ್ರೀ ರೇಣುಕ ಶಿವಾಚಾರ್ಯಸ್ವಾಮಿಗಳು, ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಉದ್ಘಾಟನೆಯನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೆರವೇರಿಸುವರು. ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಜಿ.ಎಸ್.ಬಸವರಾಜು, ಜಿ.ಬಿ.ಜ್ಯೋತಿಗಣೇಶ್, ಎಸ್.ಶಿವಣ್ಣ, ಉದೇಶ್, ಕೆ.ಎನ್.ಜಯಲಿಂಗಪ್ಪ ಅವರುಗಳು ಆಗಮಿಸುವರು.







