ಬೆಂಗಳೂರು
ಪ್ಯಾರಾ ಒಲಂಪಿಕ್ಸ್‍ಗಾಗಿಯೇ ಪ್ರತ್ಯೇಕ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಯೋಜನೆ ರೂಪಿಸುವುದಾಗಿ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಇಂದಿಲ್ಲಿ ಹೇಳಿದ್ದಾರೆ.
ಇಂಡೋನೇಷಿಯಾದಲ್ಲಿ ನಡೆದ ಪ್ಯಾರಾ ಒಲಿಂಪಿಕ್ಸ್‍ನಲ್ಲಿ 9 ಪದಕ ಗಳಿಸಿದ ವಿಶೇಷ ಚೇತನರನ್ನು ಸನ್ಮಾನಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕ್ರೀಡಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಲೇ ಬಂದಿದೆ, ಮುಂದಿನ ಕ್ರಿಯಾಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಈ ಕುರಿತು ಚಿಂತನೆ ಮಾಡಲಾಗುವುದು ಎಂದು ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಳಂಬ ಮಾಡುತ್ತಿರುವ ಪಟ್ಟಿಯಲ್ಲಿ ಯಾರೇ ಇದ್ದರೂ ಮುಂದಿನ ಮಾರ್ಚ್ ತಿಂಗಳೊಳಗಾಗಿ ಅವರಿಂದ ತೆರಿಗೆ ವಸೂಲಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಡಾ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದ ರೈತರ ಹಿತರಕ್ಷಣೆ ಮಾಡುವ ಬಗ್ಗೆ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.ರೈತರ ಹಿತವೇ ನಮ್ಮ ಸರ್ಕಾರಕ್ಕೆ ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ, ಹಸಿರು ಕ್ರಾಂತಿ ನೀತಿ ಜಾರಿ ಮಾಡಿದ್ದು, ಕಾಂಗ್ರೆಸ್ ಪಕ್ಷ ಎಂದು ಅವರು ಗೃಹಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ