ಬೆಂಗಳೂರು
ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನದಲ್ಲಿ ಹಾಜರಾಗಿದ್ದವರಲ್ಲಿ ಆತಂಕ ಮೂಡಿದೆ.ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ನನಗೆ ಕೋವಿಡ್ ರೋಗಲಕ್ಷಣ ಇರಲಿಲ್ಲ. ಆದರೆ ಕೋವಿಡ್ ಟೆಸ್ಟ್ನ ವರದಿ ಪಾಸಿಟಿವ್ ಬಂದಿದೆ.
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ. ದಿನೇಶ್ ಗುಂಡೂರಾವ್ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು, ಹಾಗಾಗಿ ಸಹಜವಾಗಿಯೇ ಇವರ ಸಂಪರ್ಕಕ್ಕೆ ಬಂದವರಲ್ಲಿ ಕರೊನಾ ಭೀತಿ ಆವರಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ.