ಬೆಂಗಳೂರು
ವಾಲಿಬಾಲ್ ಆಡುವಾಗ ಕ್ಲುಲಕ ವಿಷಯಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರು ಹಲ್ಲೆ ನಡೆಸಿದ್ದರಿಂದ ನೊಂದ ಯುವಕನೋರ್ವ ಶಂಕಾಸ್ಪದವಾಗಿ ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಹೊರವಲಯದ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ನೆಲವಾಗಿಲುವಿನ ಮುರುಳಿ(21)ಎಂದು ಆತ್ಮಹತ್ಯೆಗೆ ಶರಣಾದವರನ್ನು ಗುರುತಿಸಲಾಗಿದೆ.ಸತ್ಯವಾರದ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮುರುಳಿಗೆ ವಾಲಿಬಾಲ್ ಆಡುವ ವೇಳೆ ಸ್ನೇಹಿತರು ಬೈದಿದ್ದಾರೆ.
ಇದರಿಂದ ಮನನೊಂದ ಮುರಳಿ ಗ್ರಾಮದ ಹೊರಭಾಗದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ.ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ ದೊರೆತಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಚಾಲಕ ಸಾವು
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗೌರಿಬಿದನೂರು ಬಳಿಯ ದೊಡ್ಡೂರಿನ ಮಂಜುನಾಥ್(34)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಭಾನುವಾರ ಮಧ್ಯರಾತ್ರಿ 11.45ರ ವೇಳೆ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ವೇಳೆ ಯಲಹಂಕ ವೃತ್ತದ ಬಳಿಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಚಲಾಯಿಸುತ್ತಿದ್ದ ಚಾಲಕ ಮಂಜುನಾಥ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
