ಹುಳಿಯಾರಿನಲ್ಲಿ ಕೊರೊನಾ ತಡೆಗೆ ಔಷಧ ಸಿಂಪಡಣೆ

ಹುಳಿಯಾರು:

   ಪಟ್ಟಣದಲ್ಲಿ ಕರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣ ಪಂಚಾಯ್ತಿ ಸಿಬ್ಬಂದಿಗಳು ಸಾರ್ವಜನಿಕ ಸ್ಥಳಗಳಲ್ಲಿ ಔಷಧ ಸಿಂಪಡಣೆ ಮಾಡಿದರು.

   ಪಟ್ಟಣ ಪಂಚಾಯ್ತಿಯಿಂದ ಪಟ್ಟಣದಲ್ಲಿ ಸ್ವಚ್ಛತೆ ಪಾಲನೆಗೆ ಆದ್ಯತೆ ನೀಡಲಾಗಿದೆ. ಕೊರೊನಾ ವೈರಸ್ ತಡೆಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಈಗ ಪಟ್ಟಣದ ಎಲ್ಲ ವಾರ್ಡ್‍ಗಳಲ್ಲೂ ಔಷಧ ಸಿಂಪಡಣೆ ಮಾಡಲಾಗುವುದು. ಈಗಾಗಲೇ ಸಿಂಪಡಣಾ ಕಾರ್ಯ
ಪ್ರಾರಂಭಿಸಲಾಗಿದೆ. ಸಿಂಪಡಣೆಗೆ ಅಗತ್ಯವಾದ ವಾಹನ ಹಾಗೂ ಸಲಕರಣೆಗಳನ್ನು ಸಿದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದರು.

    ಪಟ್ಟಣದ ನಾಗರಿಕರು ಹಾಗೂ ಪಟ್ಟಣಕ್ಕೆ ಬಂದು ಹೋಗುವ ಜನರು ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗುಂಪಾಗಿ ಓಡಾಡುವುದನ್ನು ನಿಲ್ಲಿಸಬೇಕು. ಆರೋಗ್ಯ ಇಲಾಖೆ ಮಾಡಿರುವ ಸಲಹೆ ಹಾಗೂ ಸೂಚನೆಗಳನ್ನು ತಪ್ಪದೆ ಅನುಸರಿಸಬೇಕು ಎಂದು ಸಲಹೆ ಮಾಡಿದರು.ಸಂಕಷ್ಟದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಪಪಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಕ್ಕೆ ಎಡೆಗೊಡಬಾರದು. ಸಿಬ್ಬಂದಿ ರೋಗ ನಿರೋಧಕ ಔಷಧ ಸಿಂಪರಣೆ ಮಾಡಲು ಬಂದಾಗ, ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link