ಕೆಳಗಿಳಿಸದೇ ರಾಷ್ಟ್ರಧ್ವಜಕ್ಕೆ ಅವಮಾನ

ಹಾನಗಲ್ಲ :

        ಗಣರಾಜ್ಯೋತ್ಸವದಂದು ನಡೆಸಿದ್ದ ಧ್ವಜಾರೋಹಣವನ್ನು ಭಾನುವಾರವೂ ಕೆಳಗಿಳಿಸದೇ ರಾಷ್ಟ್ರಧ್ವಜಕ್ಕೆ ಅವಮಾನ ತೋರಿದ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

        ಕಲಕೇರಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಶನಿವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ್ದರು. ಆದರೆ ಸಂಜೆ 5ಕ್ಕೆ ಧ್ವಜವನ್ನು ಅವರೋಹಣ ಮಾಡದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರ ಸಂಜೆಯವರೆಗೂ ಧ್ವಜವನ್ನು ಕೆಳಗಿಳಿಸದಿದ್ದಾಗ ಸಾರ್ವಜನಿಕರು ಆಸ್ಪತ್ರೆ ಆವರಣದಲ್ಲಿ ಸಭೆ ಸೇರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲು ತೀರ್ಮಾನಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಈ ನಿರ್ಲಕ್ಷ ಧೋರಣೆ ತೋರಿದ್ದಲ್ಲದೇ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸಂಬಂಧಿಸಿದ ಜಿಲ್ಲಾಡಳಿತ ಕ್ರಮ ಜರುಗಿಸಬೇಕು ಎಂದೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.

          ರಾಷ್ಟ್ರೀಯ ಹಬ್ಬಗಳ ಕುರಿತು ಅಧಿಕಾರಿಗಳಲ್ಲಿ ಭಕ್ತಿ ಭಾವನೆ ಕಡಿಮೆಯಾಗುತ್ತಿದೆ. ಧ್ವಜಾರೋಹಣ ನೆರವೇರಿಸಿದ ಮೇಲೆ ಧ್ವಜ ಇಳಿಸದಿರುವುದು ಸಿಬ್ಬಂದಿಗಳ ಕರ್ತವ್ಯಕ್ಕೆ ತೋರಿದ ದಿವ್ಯ ನಿರ್ಲಕ್ಷವಾಗಿದೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸ್ಥಳೀಯವಾಗಿ ಇಲ್ಲದಿರುವುದೇ ಈ ಘಟನೆಗೆ ಕಾರಣವಾಗಿದೆ. ತಪ್ಪಿತಸ್ಥ ಸಿಬ್ಬಂದಿಯ ಮೇಲೆ ಜಿಲ್ಲಾಡಳಿತ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಬೇಕು……..ಅಜ್ಜಪ್ಪ ಶಿರಳ್ಳಿ,ತಾಪಂ ಸದಸ್ಯ,ಕಲಕೇರಿ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link