ಜಿಲ್ಲಾ ಕೋರ್ ಕಮಿಟಿ ಮತ್ತು ಆಕಾಂಕ್ಷಿತರ ಸಭೆ..!

ದಾವಣಗೆರೆ

  ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಇಂದು (ಅ.27ರಂದು) ನಗರದಲ್ಲಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 12ರಂದು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪಕ್ಷದ ಟಿಕೆಟ್ ಬಯಸಿ ಸುಮಾರು 400ಕ್ಕೂ ಹೆಚ್ಚು ಮಂದಿ ಪಕ್ಷದ ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದಾರೆ.

    ಆದ್ದರಿಂದ ಇಂದು ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುವ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಜಿಲ್ಲಾ ಮಂತ್ರಿ ಕೆ.ಎಸ್.ಈಶ್ವರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಜಿಲ್ಲೆಯ ಶಾಸಕರು, ಮಾಜಿ ಶಾಸಕರುಗಳ, ಮಾಜಿ ಮೇಯರ್‍ಗಳ ಸಮ್ಮುಖದಲ್ಲಿ ಚರ್ಚೆ ನಡೆಸಿ, ಗೆಲ್ಲುವ ಸಾಮಥ್ರ್ಯ ಇರುವ ಯೋಗ್ಯ ಅಭ್ಯರ್ಥಿಗಳನ್ನು ಅಚಿತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

    ನಂತರ ಸಂಜೆ 5 ಗಂಟೆಗೆ ಅದೇ ಕಲ್ಯಾಣ ಮಂಟಪದಲ್ಲಿ ಈಗಾಗಲೇ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿರುವ 400ಕ್ಕೂ ಹೆಚ್ಚು ಆಕಾಂಕ್ಷಿಗಳ ಜತೆಗೆ ಕೆ.ಎಸ್.ಈಶ್ವರಪ್ಪ ಮತ್ತು ಸಂಸದರು, ಶಾಸಕರು ಸಭೆ ನಡೆಸಿ, ಟಿಕೆಟ್‍ನಿಂದ ವಂಚಿತರಾಗುವ ಕಾರ್ಯಕರ್ತರ ಮನವೋಲಿಸಿ, ಚುನಾವಣಾ ರಣತಂತ್ರ ರೂಪಿಸಲಿದ್ದಾರೆ ಎಂದು ಹೇಳಿದರು.

30 ಸ್ಥಾನಗಳಲ್ಲಿ ಗೆಲುವು:

    ಇತ್ತೀಚೆಗೆ ಶಾಸಕ ಶಾಮನೂರು ಶಿವಶಂಕರಪ್ಪನವರು ಪಾಲಿಕೆಯ ಎಲ್ಲಾ 45 ಸ್ಥಾನಗಳನ್ನು ಗೆಲ್ಲುವುದಾಗಿ ಹಾಗೂ ನಿನ್ನೆ ಜಿಲ್ಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ 40 ಸ್ಥಾನ ಗೆಲ್ಲುತ್ತೇವೆ ಎಂಬುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಏನೇನು ದುರಾಡಳಿತ ನಡೆದಿವೆ ಎಂಬುದನ್ನು ಜನರು ಗಮನಿಸಿದ್ದು, ಈಗಾಗಲೇ ನಾವು ವಾರ್ಡ್‍ವಾರು ಜನರನ್ನು ಭೇಟಿಯಾದಾಗ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಬಾರಿ ಬಿಜೆಪಿ 30ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‍ಗೆ ಹಿಡಿ ಶಾಪ:

     ಕಳೆದ ಬಾರಿ ಚುನಾವಣೆಯಲ್ಲಿ ಪಾಲಿಕೆಯ 41 ಸ್ಥಾನಗಳ ಪೈಕಿ ಕಾಂಗ್ರೆಸ್ 39 ಸ್ಥಾನ ಪಡೆದಿತ್ತು. ಅಲ್ಲದೇ, ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲೂ ಅವರದೇ ಶಾಸಕರಿದ್ದರೂ ಸ್ಮಾರ್ಟಿ ಯೋಜನೆಯಲ್ಲಿ ಸರ್ಕಾರದಿಂದ ನೂರಾರು ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಆ ಅನುದಾನವನ್ನು ಬಳಕೆ ಮಾಡಿಕೊಂಡು ಸ್ಮಾರ್ಟ್ ಸಿಟಿ ನಿರ್ಮಿಸಿಲ್ಲ. ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ ಎಂಬುದಾಗಿ ಕಾಂಗ್ರೆಸ್‍ನವರಿಗೆ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.

     ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎನ್.ಶಿವಕುಮಾರ್, ಎನ್.ರಾಜಶೇಖರ್, ದಕ್ಷಿಣ ವಲಯದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉತ್ತರ ವಲಯದ ಅಧ್ಯಕ್ಷ ಸಂಗನಗೌಡ್ರು, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ.ಶ್ರೀನಿವಾಸ್, ಮಹಿಳಾ ಮೋರ್ಚಾ ಅಧ್ಯಕ್ಷೆ ಎಚ್.ಸಿ.ಜಯಮ್ಮ, ಮುಖಂಡರುಗಳಾದ ಮಹೇಶ್ ರಾಯಚೂರು, ಟಿಂಕರ್ ಮಂಜಣ್ಣ, ಕಿರಿಟ್, ಆನಂದರಾವ್ ಶಿಂಧೆ, ಧನಂಜಯ ಕಡ್ಲೇಬಾಳ್, ಮುಕುಂದಪ್ಪ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link