ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಬಳ್ಳಾರಿ

     ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ನೀಡುವುದರ ಜೊತೆಗೆ ಖಾಸಗಿ ಶಾಲೆಗಳಿಗೂ ಭೇಟಿ ನೀಡಿ ಪೋಲಿಯೊ ಲಸಿಕೆ ಕುರಿತಾದ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ನಿತೀಶ್ ಅವರು ಸೂಚಿಸಿದರು.

    ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಯೋಜನ ನಿರ್ವಹಣಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಉಂಟಾಗಿರುವ ಲಸಿಕಾ ಸಾಮಾಗ್ರಿಗಳ ಕೊರತೆಗಳ ಕುರಿತಾದ ಮಾಹಿತಿ ಹಾಗೂ ವರದಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಲಸಿಕೆ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಪ್ರಚಾರ ಹಾಗೂ ಜಾಗೃತಿ ಮೂಡಿಸಬೇಕು ಎಂದು ಹೇಳಿದ ಅವರು ತಾಯಿ ಕಾಡ್ರ್ಗೆ ಸಂಬಂಧಿಸಿದ ಗೊಂದಲಗಳನ್ನು ಶೀಘ್ರದಲ್ಲಿಯೇ ಸರಿಪಡಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ