ಡಿ ಕೆ ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು:

      ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ . ಡಿಕೆ ಶಿವಕುಮಾರ್ ಅವರಿಗೆ ಕಳೆದ ಆರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಪುಷ್ಪ ಗುಚ್ಛ ನೀಡುವ ಮೂಲಕ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಯಿಂದ ಬೀಳ್ಗೂಟ್ಟಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಡಾ. ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link