ತೀವ್ರ ಕುತೂಹಲ ಕೆರಳಿಸಿದ ಮಾಜಿ ಸಿಎಂ ಹಾಗು ಡಿಕೆ ಶಿವಕುಮಾರ್ ಭೇಟಿ..!

ಬೆಂಗಳೂರು

   ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಹೊಸ ಹೊಸ ರೂಪ ಪಡೆಯುತ್ತಿವೆ ಅತ್ತ ರೂಲಿಂಗ್ ಪಾರ್ಟಿ ಗೊಂದಲ ಒಂದು ಕಡೆಯಾದರೆ ಇತ್ತ ಆಪೋಸಿಷನ್ ಪಾರ್ಟಿ ಒಂದು ಕಡೆ ಈ ಮಧ್ಯೆ  ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕತೂಹಲಕ್ಕೆ ಕಾರಣವಾಗಿದೆ.

   ಹಿರಿಯ ನಾಯಕರು ಸಭೆ ನಡೆಸಿದ ಬಳಿಕ ಸಿದ್ದರಾಮಯ್ಯರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಅಧ್ಯಕ್ಷರ ಹುಡುಕಾಟಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.

  ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬ ಸುದ್ದಿಗಳು ಈಗಾಗಲೇ ಹಬ್ಬಿವೆ. ಮತ್ತೊಂದು ಕಡೆ ಕೆ. ಎಚ್. ಮುನಿಯಪ್ಪ, ಬಿ. ಕೆ. ಹರಿಪ್ರಸಾದ್ ಹೆಸರನ್ನು ಸಹ ಸೋನಿಯಾ ಗಾಂಧಿಗೆ ಕಳಿಸಲಾಗಿದ್ದು, ಅಧ್ಯಕ್ಷ ಪಟ್ಟ ಯಾರಿಗೆ ಎಂಬುದು ಕುತೂಹಲ ಮೂಡಿಸಿದೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap