ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ: ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ

ತುಮಕೂರು

     ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಹಬ್ಬದಂತೆ ಆಚರಿಸಿದರು.

     ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ ಅವರ ಸಹಯೋಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ನಗರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ನಗರದ ಕನ್ನಡ ಭವನದಲ್ಲಿ ಪದಗ್ರಹಣ ಸಮಾಋಂಭದ ನೇರ ಪ್ರಸಾರದ ವೀಕ್ಷಣೆಗಾಗಿ ವಿಶಾಲ ಎಲ್‍ಇಡಿ ಪರದೆ ಅಳವಡಿಸಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

     ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಯಾಧ್ಯಕ್ಷರಾದ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್ ಖಂಡ್ರೆ ಅವರು ಪದಗ್ರಹಣದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು. ಕೊರೊನಾ ಸೋಂಕಿನ ಹಿನ್ನೆಯಲ್ಲಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲು ಸಾಧ್ಯವಾಗದ ಕಾರಣ ರಾಜ್ಯದೆಲ್ಲೆಡೆ ಸ್ಥಳೀಯ ಮುಖಂಡರು ಎಲ್‍ಇಡಿ ಪರದೆ ಮೂಲಕ ಕಾರ್ಯಕ್ರಮದ ವೀಕ್ಷಣೆಗೆ ಹಾಗೂ ನಾಯಕರು ಬೋಧಿಸುವ ಪ್ರತಿಜ್ಞೆ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿತ್ತು.

     ಕನ್ನಡ ಭವನದಲ್ಲಿ ಕಾರ್ಯಕರ್ತರು ಶಿಸ್ತು, ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರತಿಯೊಬ್ನರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರು.

      ಕನ್ನಡ ಭವನದ ಪ್ರವೇಶ ದ್ವಾರದಲ್ಲಿ ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಸ್ಯಾನಿಟೈಸಿಂಗ್ ಮಾಡಿ ಪ್ರವೇಶ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಸ್ಕ್ ಜೊತೆಗೆ ಗಾಂಧಿ ಟೋಪಿ ಧರಿಸಿ, ಶಿಸ್ತಿನಿಂದ ಪಾಲ್ಗೊಂಡಿದ್ದರು.

     ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಶಿ ಹುಲಿಕುಂಟೆ ಮಠ್, ಇಂದು ಡಿ.ಕೆ.ಶಿವಕುಮಾರ್ ಅವರ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 7,800ಕ್ಕೂ ಹೆಚ್ಚು ಸ್ಥಳಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನ, ಡಿಜಿಟಲ್ ಮತ್ತು ಝೂಮ್ ಸಂವಾದದ ಮೂಲಕ ಜನ ಪಾಲ್ಗೊಂಡಿದ್ದಾರೆ. ತುಮಕೂರು ನಗರವೂ ಸೇರಿದಂತೆ ಜಿಲ್ಲೆಯಲ್ಲೂ ಹೆಚ್ಚು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮ ಪಡುತ್ತಿದ್ದಾರೆ ಎಂದರು.

    ಕೆಪಿಸಿಸಿ ನೂತನ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಬೆಂಬಲಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಿಂತಿದ್ದು, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಅವರ ಜೊತೆಯಲ್ಲಿದ್ದು, ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

     ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷರಾದ ರಾಹುಲ್ ಗಾಂಧಿ, ಕರ್ನಾಟಕ ಉಸ್ತುವಾರಿಗಳಾದ ವೇಣುಗೋಪಾಲ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರನ್ನು ನೇಮಕ ಮಾಡಿದ್ದು, ಇವರೆಲ್ಲರಿಗೂ ಯುವ ಕಾಂಗ್ರೆಸ್ ಜೊತೆಯಲ್ಲಿದ್ದು, ಪೂರಕವಾಗಿ ಕೆಲಸ ಮಾಡಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.

    ಮುಖಂಡ ರಾಜೇಶ್ ದೊಡ್ಮನೆ ಮಾತನಾಡಿ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರ ಸಹಯೋಗದಲ್ಲಿ ಇಂದು ಕನ್ನಡ ಭವನದಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭವನ್ನು ಎಲ್‍ಇಡಿ ಸ್ಕ್ರೀನ್ ಮೂಲಕ ವೀಕ್ಷಿಸಲು ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು ್ಕ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಉತ್ಸಾಹದಿಂದ ಭಗವಹಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷ ಬೆಂಬಲಿಸಲು 7676366666 ಸಂಖ್ಯೆಗೆ ಕರೆ ಮಾಡುವ ಮೂಲಕ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡು ಈ ವಿನೂತನ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

   ಯುವ ಕಾಂಗ್ರೆಸ್ ಉಪಾಧ್ಯಕ್ಷ ಇಲಾಹಿ ಸಿಖಂದರ್ ಮಾತನಾಡಿ, ಇಂದಿನ ಈ ಪ್ರತಿಜ್ಞಾ ದಿನದ ಉದ್ದೇಶ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತ್ರವಲ್ಲದೆÀ, ರಾಜ್ಯದ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಈ ಮೂಲಕ ಪ್ರತಿಜ್ಞೆ ಸ್ವೀಕಾರ ಮಾಡಿದ್ದಾರೆ ಎಂದು ಹೇಳಿದರು.

   ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರುಗಳ ಜೊತೆಗಿದ್ದೇವೆ ಎಂಬುದನ್ನು ನಾವಿಂದು ಇಲ್ಲಿ ಪ್ರತಿಜ್ಞೆ ಮಾಡುವ ಮೂಲಕ ತೋರಿಸಿದ್ದೇವೆ ಎಂದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮೋಹನ್, ಎಸ್ಟಿ ಘಟಕದ ಅಧ್ಯಕ್ಷ ತು.ಬಿ.ಮಲ್ಲೇಶ್ ದರ್ಶನ್, ರಾಘವೇಂದ್ರ ಸ್ವಾಮಿ, ಶಿವಾಜಿ, ಆಕಾಶ್, ಅನಿಲ್‍ಕುಮಾರ್, ಪರಶುರಾಮ್, ಇ.ಟಿ.ನಾಗರಾಜು, ಮಾದೇವಗೌಡ, ಸುಶೀಲ್ ಕುಮಾರ್, ಬಿ.ಜಿ.ಲಿಂಗರಾಜು, ಜಿ.ಎಲ್.ಗೌಡ, ಸೇರಿದಂತೆ ಸೇವಾದಳದ ಪದಾಧಿಕಾರಿಗಳು, ಕಿಸಾನ್ ಘಟಕ, ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link