ಬೆಂಗಳೂರು :
ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಶಾಕ್ ಕೊಟ್ಟಿತ್ತು. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕೊರೋನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದಾರೆ. ಇದೀಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಕೊವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೂ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








