ಉಡುಪಿ
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಕಾನೂನು ಸಂಬಂಧಿಸಿದ ಪ್ರಕ್ರಿಯೆ,ಅದನ್ನು ಮುಂದಿಟ್ಟುಕೊಂಡು ಶಾಂತಿಯುತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಸ್ವಾತಂತ್ರ್ಯವಿದೆ ಅದನ್ನು ನಾವು ಪ್ರಶ್ನಿಸುವುದಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ,ಗೃಹ ಸಚಿವ ಅಮಿತ್ ಷಾ ಅವರ ಭಾವಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅವಹೇಳನ ಮಾಡುವ ರೀತಿಯಲ್ಲಿ ನಡೆದುಕೊಂಡಿದ್ದು, ಈ ವರ್ತನೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ ಕೆ ಶಿವಕುಮಾರ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಅನ್ಯಾಯವಾಗಿದ್ದರೆ ಸುಪ್ರೀಂ ಕೋರ್ಟ್ಗೆ ಹೋಗಲಿ. ಡಿಕೆ ಶಿವಕುಮಾರ್ ಅವರೇನು ದೇಶಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿಲ್ಲವಲ್ಲ, ತುರ್ತುಪರಿಸ್ಥಿತಿ ಎದುರಿಸಿ ಜೈಲಿಗೆ ಹೋಗಿಲ್ಲ ಎಂದು ಅವರು ಲೇವಡಿ ಮಾಡಿದರು.
ಪ್ರಧಾನಿ ಹಾಗೂ ಗೃಹ ಸಚಿವರಿಗೆ ಅಪಮಾನ ಮಾಡಿದರೆ ಪ್ರತಿರೋಧ ಮಾಡುವುದು ನಮಗೂ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ ಸಚಿವರು, ನಾಗರಿಕ ಸಮಾಜದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಶೋಭೆ ತರುವುದಿಲ್ಲ, ಜಗನ್ ಮೋಹನ್ ರೆಡ್ಡಿ, ಜನಾರ್ದನ ರೆಡ್ಡಿ ಬಂಧನವಾದಾಗ ಹೀಗೆಲ್ಲಾ ನಡೆದಿತ್ತಾ.? ಎಂದು ಪ್ರಶ್ನಿಸಿದ ಅವರು, ಬಿಜೆಪಿಗೆ ಹೋರಾಟ ನಡೆಸುವುದು ಹೊಸತಲ್ಲ ಎಂದು ತಿರುಗೇಟು ನ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
