ಬೆಂಗಳೂರು
ರಮೇಶ್ ಜಾರಕಿಹೊಳಿ ಅವರನ್ನು ಭಿನ್ನಾಭಿಪ್ರಾ ಯ ಬಗೆಹರಿಸುತ್ತೇನೆ ಎಂದು ನಿನ್ನೆ ತಾನೆ ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್ ಇಂದಾಗಲೇ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ವಿರೋಧಿಯಾಗಿರುವ ಡಿ.ಕೆ.ಶಿವಕುಮಾರ್ ಅವರ ಮನೆಗೆ ಇಂದು ಬೆಳಿಗ್ಗೆ ಜಿ.ಪರಮೇಶ್ವರ್ ಅವರು ಭೇಟಿ ನೀಡಿದ್ದು, ರಮೇಶ್ ಜಾರಕಿಹೊಳಿ ಪರವಾಗಿ ಸಂಧಾನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಕೆ.ಶಿವಕುಮಾರ್ ಅವರು ಬೆಳಗಾವಿಯ ಉಸ್ತುವಾರಿ ಸಚಿವರಾಗಿ ನೇಮಕವಾಗಿ ಪಿಎಲ್‌ಡಿ ಬ್ಯಾಂಕ್ ವಿಚಾರದಲ್ಲಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಬಲ ನೀಡಿದಾಗಲೇ ಮೊದಲ ಬಾರಿಗೆ ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷದ ಮೇಲೆ ಅಸಮಾಧಾನ ಪ್ರಾರಂಭವಾಗಿದ್ದು, ಅಂದಿನ ವರೆಗೆ ಚೆನ್ನಾಗಿದ್ದ ರಮೇಶ್ ಜಾರಕಿಹೊಳಿ, ಡಿಕೆ.ಶಿವಕುಮಾರ್ ಸಂಬಂಧ ಆ ನಂತರ ಹಳಸಿತ್ತು.
ಹಾಗಾಗಿಯೇ ಇಂದು ಪರಮೇಶ್ವರ್ ಅವರು ರಮೇಶ್ ಜಾರಕಿಹೊಳಿ ಅವರ ಪರ ವಕಾಲತ್ತು ವಹಿಸಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಂಧಾನದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.








