ವೀರಾಪುರ ಹಾಗು ಬಾಣಂದೂರಿಗೆ ಡಿಕೆಶಿ ಭೇಟಿ

ರಾಮನಗರ

         ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಹುಟ್ಟೂರು ಮಾಗಡಿ ತಾಲೂಕಿನ ವೀರಾಪುರ ಹಾಗು ಡಾ.ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಾದ ಬಾಣಂದೂರು ಗ್ರಾಮವನ್ನು ದತ್ತು ಪಡೆದು ಸಮಗ್ರ ಅಭಿವೃದ್ದಿ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

        ಜಿಲ್ಲಾ ಕ್ರೀಡಾಂಗಣದಲ್ಲಿ ಅಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇನೆ. ಈ ಹಿಂದೆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿ ಕೆಲಸ ಮಾಡಲಾಗಿತ್ತು. ಇದೀಗ ಮತ್ತೆ ಅದರ ಸಮಗ್ರ ಅಭಿವೃದ್ಧಿ ಮಾಡಲು ತೀರ್ಮಾನಿಸಿರುವುದಾಗಿ ಅವರು ಹೇಳಿದರು.

        ಬಾಲಗಂಗಾಧರನಾಥ ಸ್ವಾಮೀಜಿ ಅವರ ಹುಟ್ಟೂರಾದ ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮತಾಳಿದ ಪುಣ್ಯನೆಲವಾಗಿದ್ದು, ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದರು.

        ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಮಾಡುತ್ತೇವೆ. ಮುಖ್ಯಮಂತ್ರಿಗಳು ಈಗಾಗಲೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಡ ತರಲಾಗುವುದು ಎಂದರು.

          ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರು ಮಾಡಲಾಗಿದೆ. ಈ ಹಿಂದೆ 5 ಸಾವಿರ ಕೋಟಿ ರೂಗಳ ಯೋಜನಾ ವೆಚ್ಚ ನಿಗಿದಿಗೊಳಿಸಲಾಗಿತ್ತು.ಆದರೆ ಸಮಗ್ರವಾಗಿ ಯೋಜವಾ ವರದಿ ರೂಪಿಸಿದ್ದ ಹಿನ್ನಲೆಯಲ್ಲಿ 9 ಸಾವಿರ ಅಧಿಕ ಕೋಟಿ ರೂಪಾಯಿಗಳ ಸಮಗ್ರ ಯೋಜನಾ ವರದಿ ಇದಾಗಲಿದ್ದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap