ಬೆಂಗಳೂರು
ಉಪ ಚುನಾವಣೆ ಮುಗಿಯುವ ತನಕ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಾಮನಗರಕ್ಕೆ ಭೇಟಿ ನೀಡದಿರಲು ನಿರ್ಧರಿಸಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ಸಂದರ್ಭದಲ್ಲಿ ರಾಮನಗರ ಭೇಟಿ ಸೂಕ್ತವಲ್ಲ ಎನ್ನುವ ನಿಲುವಿಗೆ ಬಂದಿದ್ದಾರೆ.
ರಾಮನಗರ ಕ್ಷೇತ್ರದ ಉಸ್ತುವಾರಿಯನ್ನು ಸಂಸದ ಡಿ.ಕೆ. ಸುರೇಶ್ ಅವರಿಗೆ ವಹಿಸಿದ್ದು, ಅವರು ಸಹ ಜೆಡಿಎಸ್ ಮುಖಂಡರೊಟ್ಟಿಗೆ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆಗಳು ಕ್ಷೀಣಿಸಿವೆ.
ರಾಜ್ಯ ಮಟ್ಟದ ಹೊಂದಾಣಿಕೆ ಏನೇ ಇರಲಿ, ಜಿಲ್ಲೆಯಲ್ಲಿ ಅದನ್ನೇ ಮುಂದವರಿಸಲು ನಾವು ಸಿದ್ಧರಿಲ್ಲ. ನೀವು ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿ ಸಹೋದರರಿಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಕಾರ್ಯಕರ್ತರ ಅಸಮಾಧಾನ ಕಂಡು ಕಂಗಾಲಾದ ಸಂಸದ ಡಿ.ಕೆ.ಸುರೇಶ್ ನಿನ್ನೆ ಅನಿತಾ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ