ಬಳ್ಳಾರಿ
ಬಳ್ಳಾರಿ ತಾಲೂಕಿನಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಚುನಾವಣೆ ಸಂಬಂಧ ಚೆಕ್‍ಪೋಸ್ಟ್‍ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ತಮ್ಮ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಚುನಾವಣೆಯ ಸಿದ್ಧತೆ ಮಾಡಿಕೊಳ್ಳುವಂತೆ ಬಳ್ಳಾರಿ ತಾಪಂ ಇಒ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಎಂಸಿಸಿ ನೋಡಲ್ ಅಧಿಕಾರಿ ಜಾನಕಿರಾಮ್ ಅವರು ಸೂಚನೆ ನೀಡಿದರು.
ನಗರದ ತಾಪಂ ಸಭಾಂಗಣದಲ್ಲಿ ಸೋಮವಾರದ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ನೀತಿ ಸಂಹಿತೆಯನ್ನು ಅಚ್ಚುಕಟ್ಟಾಗಿ ಪರಿಪಾಲಿಸಿ ಮತ್ತು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಅವರು ಸೂಚಿಸಿದರು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಿ ಎಂದರು.
ಈ ಸಂದರ್ಭದಲ್ಲಿ ಪಿಡಿಒಗಳು ಹಾಗೂ ಚುನಾವಣಾ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.ಮತಗಟ್ಟೆಗಳಿಗೆ ನಂಬರ್ ಬರೆಯಿಸುವ ಕಾರ್ಯ ಚುರುಕು: ಜಿಲ್ಲೆಯ ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ ಮತಗಟ್ಟೆಗಳಿಗೆ ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸಂಖ್ಯೆ ಬರೆಯಿಸುವ ಕಾರ್ಯ ಭಾನುವಾರದಿಂದ ನಡೆಯುತ್ತಿದೆ. ಚುನಾವಣೆಗೆ ನಿಯೋಜಿತರಾದ ಸಿಬ್ಬಂದಿ ಮತಗಟ್ಟೆಗಳಿಗೆ ನಂಬರ್ ಬರೆಯಿಸುತ್ತಿದ್ದು,ಅಪ್‍ಡೆಟ್ ಮಾಹಿತಿಯನ್ನು ಪ್ರತಿದಿನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
