ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯವಶ್ಯ-ಬುರ್ಹಾನ್‍ಬೇಗ್

ಹೊಳಲ್ಕೆರೆ:

         ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯವಶ್ಯ ಎಂದು ರೋಟರಿ ಕ್ಲಬ್ ಅಧ್ಯಕ್ಷ ಬುರ್ಹಾನ್ ಬೇಗ್ ಅಭಿಪ್ರಾಯ ಪಟ್ಟರು.ತಾಲ್ಲೂಕಿನ ರಾಮಗಿರಿ ರಂಗಾಪುರದಲ್ಲಿ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಆಯುರ್ವೇದ ಕಾಲೇಜು ಹಾಗೂ ರೋಟರಿ ಹೊಳಲ್ಕೆರೆ ಮತ್ತು ಋಷಿ ಸಂಸ್ಕøತಿ ವಿದ್ಯಾಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗಾಗಿ ಏರ್ಪಡಿಸಿದ್ದ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಆರೋಗ್ಯ ತಪಾಸಣೆಯನ್ನು ತಜ್ಞ ವೈದ್ಯರಿಂದ ಆಗಿಂದಾಗ್ಗೆ ಮಾಡಿಸಿಕೊಂಡು ಅವಶ್ಯವಿದ್ದಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆದರೆ ಮುಂದೆ ಅದು ಉಲ್ಬಣಗೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

           ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಸ್ಥಾನಿಕಾಧಿಕಾರಿ ಕೆ.ಎಂ.ತಿಮ್ಮರಾಜು ಮಾತನಾಡಿ ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜಿನವರು ಏರ್ಪಡಿಸಿರುವ ಈ ಚಿಕಿತ್ಸಾ ಶಿಬಿರದಲ್ಲಿ ಹಲವಾರು ನುರಿತ ವೈದ್ಯರು ತಪಾಸಣೆಯನ್ನು ಮಾಡಿ ಉಚಿತವಾಗಿ ಔಷಧಿಯನ್ನು ನೀಡುತ್ತಿರುವುದು ಶ್ಲಾಘನೀಯ ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಈ ಆಯುರ್ವೇದ ಶಿಬಿರದಲ್ಲಿ ರೋಗಗಳನ್ನು ಬಾರದಂತೆ ತಡೆಗಟ್ಟುವ ಕ್ರಮಗಳು ಆಹಾರ, ಪಥ್ಯ ಮುಂತಾದವುಗಳನ್ನು ತಿಳಿಸಿಕೊಡಲಿದ್ದಾರೆ ಎಂದರು.

         ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಎಸ್.ನಾಗರಾಜ್ ಮಾತನಾಡಿ ಮಂಡಿನೋವು, ಬೆನ್ನುನೋವು, ಚರ್ಮರೋಗ, ನರದೌರ್ಬಲ್ಯ, ಸ್ತ್ರೀಯರ ಸಮಸ್ಯೆಗಳು ಮುಂತಾದವುಗಳ ಬಗ್ಗೆ ಸೂಕ್ತವಾದ ಚಿಕಿತ್ಸೆಯನ್ನು ಇಲ್ಲಿ ಕೊಡಲಾಗುವುದು ಅವಶ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜಿನಲ್ಲಿ ನೀಡಲಾಗುವುದು ಎಂದರು.

           ಕಾರ್ಯಕ್ರಮದಲ್ಲಿ ರೋಟರಿಯನ್ ಚಿತ್ರಶೇಖರ್, ಡಾ.ಕೆ.ವಿ.ರಾಜಶೇಖರ್, ಪ್ರಾಧ್ಯಾಪಕ ಎಸ್.ಪಿ.ರವಿ ಶಿಕ್ಷಕ ಬಿ.ಪ್ರಕಾಶ್, ರೂಪಾ ಮತ್ತಿತರರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link