ಚಿತ್ರದುರ್ಗ;
ಸಮಾಜದಲ್ಲಿ ನೊಂದವರು, ಬಡವರು ಹಾಗೂ ಇತರೆ ವರ್ಗದ ಜನಸಮುದಾಯಗಳಿಗೆ ಆಗುವ ತೊಂದರೆಗಳು ಮತ್ತು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸಂಘಟನೆಯನ್ನು ಬಲಪಡಿಸುವ ಕೆಲಸ ಎಲ್ಲರೂ ಸೇರಿ ಮಾಡಬೇಕಾಗಿದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಜ್ಞಾನಪ್ರಕಾಶ್ ಕರೆ ನೀಡಿದರು.
ಚಿತ್ರದುರ್ಗದಲ್ಲಿ ಸಂಘಟನೆಯನ್ನು ಬಲಪಡಿಸುವ ಸಂಬಂಧ ಕರೆಯಲಾಗಿದ್ದ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರುಕರ್ನಾಟಕ ಮಾನವ ಹಕ್ಕುಳ ಜನಜಾಗೃತಿ ಸಮಿತಿಗೆ ಜನೋಪಯೋಗಿ ಕೆಲಸ ಮಾಡುವ ಆಸಕ್ತಿ ಇರುವ ಯುವಕರನ್ನು ಸೇರಿಸಿಕೊಂಡು ಉತ್ತಮ ಕೆಲಸ ಮಾಡಬೇಕು. ನಾವು ರಾಜದ ಎಲ್ಲಾ ಕಡೆಯೂ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಜನಪರ ಕಾಳಜಿಯ ಎ.ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ಸಂಘಟನೆ ಮಾಡಲು ಯೋಚಿಸಿದ್ದೇವೆ.
ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು ಜಿಲ್ಲಾ ಬಡಗಿ ಕೆಲಸಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಜಾಕೀರ್ ಹುಸೇನ್ ಮಾತನಾಡಿ, ನಾನು ಕಳೆದ ಎರಡು-ಮೂರು ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತು ಹಲವು ಸಂಘಟನೆಗಳಲ್ಲಿ ಕೆಲಸ ಮಾಡಿದ್ದೇನೆ.
ಈ ಸಂಘಟನೆಗೂ ನನ್ನ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಭರವಸೆ ನೀಡಿದರು ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದ ಜನರನ್ನು ಆಸೆ ಆಮೀಷವೊಡ್ಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವುದು ನೊಡುತ್ತಿದ್ದೇವೆ. ಹಣದ ಆಸೆಗಾಗಿ ನಕಲಿ ಕಂಪೆನಿಗಳಿಗೆ ಲಕ್ಷಾಂತರ ರೂಪಾಯಿ ಹಣ ಕಟ್ಟಿ ಕಳೆದುಕೊಂಡಿರುವ ಮಹಿಳೆಯರಿಗೆ ಮತ್ತು ಬಡವರಿಗೆ ನ್ಯಾಯ ದೊರೆಕಿಸಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದರುಸಭೆಯಲ್ಲಿ ರತ್ನಮ್ಮ, ಪದ್ಮ, ವೀಣಾ, ವಿನೋತ್ ಕುಮಾರ್, ನಾರಾಯಣಚಾರ್, ಎ.ವಿ.ಜಗದೀಶಾಚಾರ್, ಗಂಗಾಧರ್, ಶಾಂತಲಾ ಇನ್ನಿತರರು ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
