ವೈದ್ಯರ ನಿರ್ಧಾರ ಸ್ವಾಗತಾರ್ಹ : ಎಸ್ ಟಿ ಎಸ್

ಬೆಂಗಳೂರು

    ವೈದ್ಯರು ಮುಷ್ಕರ ಕೈಬಿಟ್ಟ ಕ್ರಮವನ್ನು ಸ್ವಾಗತಿಸುವುದಾಗಿ ಹೇಳಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ , ವೈದ್ಯರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

   ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕಳೆದ ನಾಲ್ಕೈದು ತಿಂಗಳಿನಿಂದ ಕೋವಿಡ್ -19 ಮಹಾಮಾರಿ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಜಿಲ್ಲಾಡಳಿತ ಸೇರಿದಂತೆ ಅನೇಕ ಇಲಾಖೆಗಳ ತಂಡದವರು ಅವಿರತವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಇದು ಎಂದಿಗೂ ಸ್ಮರಣೀಯವಾಗಿದ್ದು, ಯಾರೂ ಎಂದೂ ಸಹ ಇದನ್ನು ಮರೆಯಲಾಗದು.

   ಇನ್ನು ಕೋವಿಡ್ ಸಂದರ್ಭದಲ್ಲಿ ವೈದ್ಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ, ಈ ಎಲ್ಲ ಸಮಸ್ಯೆಗಳು ಸರ್ಕಾರದ ಅರಿವಿಗೆ ಬಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್ ಪಡೆದಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಜೊತೆಗೆ ರಾಜ್ಯ ಮತ್ತು ಮೈಸೂರು ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೀಗಾಗಿ ಕೋವಿಡ್ ಸನ್ನಿವೇಶದಲ್ಲಿ ಜನರ ಆರೈಕೆಗೆ ಮತ್ತೆ ಮುಂದಾಗುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link