ಬೆಂಗಳೂರು
ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತರಲು ಪ್ರಾಯೋಗಿಕವಾಗಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಆಯ್ಕೆ ಮಾಡಿಕೊಂಡಿದೆ. ಈ ದಿಸೆಯಲ್ಲಿ ಅಗತ್ಯ ಇರುವ ಎಲ್ಲ ಮಾಹಿತಿಯನ್ನು ಬೆಳೆ ಸಾಲ ಮನ್ನಾ ಅಂತರ್ಜಾಲಕ್ಕೆ ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಡಿಸಿಸಿ ಬ್ಯಾಂಕಿನಲ್ಲಿ, ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೃಷಿ ಸಾಲ ಪಡೆದಿದ್ದ ರೈತರ ಸಂಪೂರ್ಣ ಮಾಹಿತಿಯನ್ನು ಅಂತರ್ಜಾಲಕ್ಕೆ ಅಳವಡಿಸುವ ಕೆಲಸ ಶೇಕಡ 90ರಷ್ಟು ಮುಕ್ತಾಯವಾಗಿದೆ. ಸೋಮವಾರದಿಂದ ಸಾಲ ಪಡೆದಿರುವ ಪ್ರತಿಯೊಬ್ಬ ರೈತರಿಗೂ ಸ್ವಯಂ ಘೋಷಣ ಪ್ರಮಾಣ ಪತ್ರವನ್ನು ನೀಡಿ ಸಹಿ ಪಡೆಯಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ