ಟಿಕೆಟ್ ವಂಚಿತರು ಬಂಡಾಯವೇಳಬೇಡಿ: ಲತಾ ಮಲ್ಲಿಕಾರ್ಜುನ್

ಹರಪನಹಳ್ಳಿ:

     ಪುರಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದವರು ಬಂಡಾಯ ವೇಳದೇ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದರು.

      ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಪುರಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. `ವಾರ್ಡಗಳು ಇರುವುದು 27 ಮಾತ್ರ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ನೂರಾರು ಇದೆ. ಟಿಕೆಟ್ ಒಬ್ಬರಿಗೆ ಕೊಡಲಿಕ್ಕೆ ಸಾಧ್ಯ. ಹಾಗಾಗಿ ಪಕ್ಷದ ಗೆಲುವಿಗೆ ಎಲ್ಲರ ಸಹಕಾರ ಮುಖ್ಯ’ ಎಂದರು.

      ಪಕ್ಷದ ಪರ ಕೆಲಸ ಮಾಡಿದರೆ ಮುಂದೊಂದು ದಿನ ಪಕ್ಷ ನಿಮ್ಮನ್ನು ಗುರುತಿಸುತ್ತದೆ. ಆಯಾ ವಾರ್ಡಿನ ಕಾರ್ಯಕರ್ತರು, ಆಕಾಂಕ್ಷಿಗಳು ಸ್ಥಳೀಯ ಪಕ್ಷದ ಹಿರಿಯರ ಜೊತೆ ಸಮಾಲೋಚನೆ ನಡೆಸಬೇಕು. ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿ ಗೆಲ್ಲಿಸಿ. ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರಬೇಕು ಎಂಬುದು ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಅವರ ಕನಸಾಗಿತ್ತು. ಅವರ ಕನಸು ನನಸು ಮಾಡಲು ಕಾರ್ಯಕರ್ತರು ಶ್ರಮಿಸಬೇಕು’ ಎಂದರು.

       ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಈ ಬಾರಿ ಪುರಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅತಿ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಪಕ್ಷದ ಟಿಕೆಟ್ ಸಿಗದಿದ್ದರೆ ಬೇರೆ ಪಕ್ಷಕ್ಕೆ ಹೋಗಬೇಡಿ. ದಿ.ಎಂ.ಪಿ.ರವೀಂದ್ರ ಅವರು ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ.

        ಈ ಅಂಶಗಳನ್ನು ಮತದಾರರಿಗೆ ಮನದಟ್ಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.
ಕೆಪಿಸಿಸಿ ಹಿಂದಳಿದ ವರ್ಗಗಳ ಉಪಾದ್ಯಕ್ಷ ಉಮೇಶಬಾಬು, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ.ಪ್ರಕಾಶ್, ಕಾಂಗ್ರೆಸ್ ಪಕ್ಷದ ಮುಖಂಡ, ವಕೀಲ ಚಂದ್ರೇಗೌಡ, ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ ನಿರ್ದಶಕಿ ಎಂ.ಪಿ.ವೀಣಾ, ಮುಖಂಡರಾದ ಆಲದಹಳ್ಳಿ ಷಣ್ಮುಖಪ್ಪ, ಜಾವೇದ್, ವಕೀಲ ಅಸ್ಲಂ, ಹಲಗೇರಿ ಮಂಜಪ್ಪ ಮಾತನಾಡಿದರು.

       ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಎಂ.ವಿ.ಅಂಜಿನಪ್ಪ, ಕಟ್ಟಿ ಆನಂದಪ್ಪ, ವಕೀಲ ವೆಂಕಟೇಶ, ಅಬ್ದುಲ್ ರಹಿಮಾನ, ನೀಲಗುಂದ ವಾಗೀಶ, ಪುಷ್ಪಾ ದಿವಾಕರ, ಡಿ.ರಾಜಕುಮಾರ, ಮಂಜುಳಾ ಗುರುಮೂರ್ತಿ, ಡಾ.ಮಹಾಂತೇಶ, ವಸಂತಪ್ಪ, ಚಿಕ್ಕೇರಿ ಬಸಪ್ಪ , ಮತ್ತೂರು ಬಸವರಾಜ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap