ಬೆಂಗಳೂರು
ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂಧನ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಸರ್ಕಾರದ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆಯಾಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಕೇಂದ್ರದ ವಿದ್ಯುತ್ ಗ್ರಿಡ್‍ನಿಂದ ಸಹ ರಾಜ್ಯಕ್ಕೆ ಸಮರ್ಪಕವಾಗಿ ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೋಲಾರ್ ಮತ್ತು ಜಲವಿದ್ಯುತ್ ಮೂಲಕ ವಿದ್ಯುತ್ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಲವಿದ್ಯುತ್ ಹಾಗೂ ಸೋಲಾರ್ ಪವರ್ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ನೀಡಿದ್ದಾರೆ.
ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ಲೋಡ್ ಶೆಡ್ಡಿಂಗ್‍ಗೆ ಆದೇಶ ಹೊರಡಿಸಲು ಸರ್ಕಾರ ಸಜ್ಜಾಗುತ್ತಿದೆ ಎಂಬ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೆಪಿಟಿಸಿಎಲ್ ಅಧಿಕಾರಿಗಳಿಗೆ ಲೋಡ್‍ಶೆಡ್ಡ ಮಾಡದಂತೆ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








