ಶಿರಾ
ಕೋವಿಡ್ ಹಿನ್ನೆಲೆಯಲ್ಲಿ ಬಹುತೇಕ ಕುಟುಂಬಗಳು ಸ್ಥಳೀಯ ಹಣಕಾಸು ಸಂಸ್ಥೆಗಳಲ್ಲಿ ಸಾಲ ಪಡೆದಿದ್ದು, ಅಂತಹ ಕುಟುಂಬಗಳು ಪಡೆದ ಸಾಲವನ್ನು ತೀರುವಳಿ ಮಾಡುವಂತೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು ಎಂದು ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಸ್ಥಳೀಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ತಾಕೀತು ಮಾಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ವತಿಯಿಂದ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ಮಾಡಲು ಒತ್ತಡ ಹೇರುತ್ತಿರುವುದುನ್ನು ಖಂಡಿಸಿ ಪ್ರತಿಭಟನೆ ನಡೆಸಿತ್ತು.ಈ ಸಂಬಂಧ ಬುಧವಾರ ಸ್ಥಳೀಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ಕರೆದಿದ್ದ ತಾಲ್ಲೂಕು ದಂಡಾಧಿಕಾರಿಗಳು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಸಾಲ ಮರುಪಾವತಿ ಮಾಡಿದಲ್ಲಿ ನಮ್ಮ ಅಭ್ಯಂತರವೇನೂ ಇಲ್ಲ.
ಆದರೆ ಅತ್ಯಂತ ಸಂಕಷ್ಟದಲ್ಲಿರುವ ಸಂಘ-ಸಂಸ್ಥೆಗಳಲ್ಲಿ ಆರ್ಥಿಕ ಸಂಕಷ್ಟಕ್ಕಾಗಿ ಸಾಲ ಪಡೆದ ಫಲಾನುಭವಿಗಳ ಮೇಲೆ ಒತ್ತಡ ತಂದು ಸಾಲ ವಸೂಲಾತಿ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸಾಲದ ಮೇಲಿನ ಬಡ್ಡಿಯನ್ನು ತೀರುವಳಿ ಮಾಡುವಂತೆಯೂ ಒತ್ತಡ ಹೇರಬಾರದು. ಒಂದು ವೇಳೆ ಅಂತಹ ಪ್ರಕರಣ ಕಂಡು ಬಂದಲ್ಲಿ ಅಂತಹ ಮೈಕ್ರೋ ಫೈನಾನ್ಸ್ ಸಂಸ್ಥೆಯ ವಿರುದ್ಧ ಕಠಿಣ ಕ್ರಮವನ್ನೂ ಜರುಗಿಸಬೇಕಾಗುತ್ತದೆ ಎಂದು ತಾಕೀತು ಮಾಡಿದರು.ತಾಲ್ಲೂಕು ಪಂಚಾಯ್ತಿ ಮೋಹನ್‍ಕುಮಾರ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ