ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಹರಡಲು ಬಿಡಬಾರದು : ಡಿಸಿಎಂ ಸವದಿ

ಬಳ್ಳಾರಿ

    ನಮ್ಮ ಸರ್ಕಾರ ಈಗಾಗಲೇ ಸಾಕಷ್ಟು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಬಳ್ಳಾರಿ ಜಿಲ್ಲೆಯ 3 ವ್ಯಕ್ತಿಗಳಲ್ಲಿ ಕರೋನಾ ಸೋಂಕು ದೃಢಪಟ್ಟಿ ರುವುದರಿಂದ ನಿನ್ನೆಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಅದರಲ್ಲೂ ಮುಖ್ಯವಾಗಿ ಹೊಸಪೇಟೆ ಸುತ್ತಮುತ್ತ ದಿಗ್ಬಂಧನವನ್ನು ( ಕಫ್ರ್ಯೂ) ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಇದರಿಂದ ತಾತ್ಕಾಲಿಕವಾಗಿ ಕೆಲವು ಅಡಚಣೆಗಳಾ ದರೂ ನಾಡಿನ ಸಮಸ್ತ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಈ ಬಗ್ಗೆ ಸೂಕ್ತ ಸಹಕಾರ ನೀಡಬೇಕೆಂದು ನಾನು ಸಾರ್ವಜನಿಕರಲ್ಲಿ ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

    ಈ ಸೋಂಕಿನ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಈಗಾಗಲೇ ನಾನು ಬಳ್ಳಾರಿ ಜಿಲ್ಲಾಡಳಿತ, ಪೆÇಲೀಸ್ ಮತ್ತು ಆರೋಗ್ಯ ಇಲಾಖೆಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ಎಲ್ಲಾ ನೆರವು ಮತ್ತು ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.ಕೆಲವು ದಿನಗಳ ಹಿಂದೆ ನಾನು ಖುದ್ದಾಗಿ ಬಳ್ಳಾರಿ ಜಿಲ್ಲೆಗೆ ಬಂದು ಸಂಬಂಧಪಟ್ಟ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಕರೋನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡುಗಳನ್ನು ತೆರೆಯುವುದರೊಂದಿಗೆ ಶಂಕಿತ ವ್ಯಕ್ತಿಗಳಿಗೆ ಪ್ರತ್ಯೇಕವಾಸದ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

   ಆದರೆ ಇವೆಲ್ಲವುಗಳಿಗಿಂತ ಹೆಚ್ಚಾಗಿ ಸಾರ್ವಜನಿಕರು ವಹಿಸುವ ಮುನ್ನೆಚ್ಚರಿಕೆ, ಕಫ್ರ್ಯು ಪಾಲನೆ, ಮಾಸ್ಕ್ ಬಳಕೆ, ಸ್ವಚ್ಛತೆ ಕಾಪಾಡುವುದು, ವ್ಯಕ್ತಿಗಳಿಂದ ವ್ಯಕ್ತಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ವಾಹನ ಮತ್ತು ಸ್ವಯಂ ಸಂಚಾರಗಳಿಗೆ ಕಡಿವಾಣ…ಈ ಮುಂತಾದ ಸ್ವಯಂ ನಿಯಂತ್ರಣ ಅನುಸರಿಸುವುದೇ ಸಮರ್ಪಕ ಮಾರ್ಗ. ಈ ನಿಟ್ಟಿನಲ್ಲಿ ನಾವೆಲ್ಲರೂ ಹೆಚ್ಚು ಜಾಗೃತರಾಗಿ ಮುಂಜಾಗ್ರತೆವಹಿಸಿ ಈ ಪಿಡುಗಿನ ಸವಾಲನ್ನು ಸಮರ್ಥವಾಗಿ ಎದುರಿಸೋಣ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap