ತುಮಕೂರು
ತುಮಕೂರು ಜಿಲ್ಲೆಯಲ್ಲಿ 5 ಕೋವಿಡ್-19 ಪ್ರಕರಣ ಕಂಡು ಬಂದಿದ್ದು, ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶದ ಮೇರೆಗೆ ಜಿಲ್ಲಾದ್ಯಂತ ಮನೆ-ಮನೆ ಆರೋಗ್ಯ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ತಿಳಿಸಿದ್ದಾರೆ.
ಈ ಸಮೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರತಿ ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ಸಮೀಕ್ಷೆಗೆ ಅವಶ್ಯವಿರುವ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಆದ್ದರಿಂದ ಸಮೀಕ್ಷೆ ಮಾಡಲು ತಮ್ಮ ಮನೆಗೆ ಬಂದಾಗ ಕುಟುಂಬ ಸದಸ್ಯರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿ ಸಹಕರಿಸಬೇಕು. ನೀವು ನೀಡಿದ ಮಾಹಿತಿ ಮೇರೆಗೆ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದರಲ್ಲದೇ ಸಮೀಕ್ಷೆಗೆ ಅಡ್ಡಿ ಪಡಿಸುವವರ ವಿರುದ್ದ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು.
ಹೈರಿಸ್ಕ್ ರೋಗಿಗಳ ಬಗ್ಗೆ ಈಗಾಗಲೇ ಆಶಾ ಕಾರ್ಯಕರ್ತೆಯರು ಸಮೀಕ್ಷೆ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಸಿದ್ಧಪಡಿಸಿರುವ ಆ್ಯಪ್‍ನಲ್ಲಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ಜಿಲ್ಲೆ ಕೋವಿಡ್-19 ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
