ಡಾ.ಕೆ ಸುಧಾಕರ್ ತಂದೆ ಮತ್ತು ಕೆಲಸದಾಳಿಗೆ ಕೊರೋನಾ..!

ಬೆಂಗಳೂರು

   ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ತಂದೆ ಹಾಗೂ ಮನೆಯ ಕೆಲಸದಾಳುಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮನೆಯ ಕೆಲಸದಾಳುಗೆ ಸೋಂಕು ದೃಢಪಟ್ಟಿತ್ತು. ಇಂದು ಬೆಳಗ್ಗೆ ಸುಧಾಕರ್ ಅವರ 82 ವರ್ಷ ಪ್ರಾಯದ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

   ಸುಧಾಕರ ಮನೆಯ ಕೆಲಸದಾಳಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಸುಧಾಕರ್ ಅವರು ತಾವು ಸ್ವಯಂ ಕ್ವಾರಂಟೈನ್ ಆಗುವುದಾಗಿ ಹೇಳಿದ್ದು ಮುಖ್ಯಮಂತ್ರಿಗಳ ಜೊತೆಗಿನ ಸಭೆಯಿಂದ ಹೊರಗುಳಿದಿದ್ದಾರೆ.

    ಈ ಬಗ್ಗೆ ಟ್ವಿಟ್ ಮಾಡಿರುವ ಸುಧಾಕರ್, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap