ರಾಧಾಕೃಷ್ಣನ್ ರಾಷ್ಟ್ರಪತಿ ಸ್ಥಾನಕ್ಕೇರಿದ ಅಗ್ರಗಣ್ಯ ಶಿಕ್ಷಕ

ಪಾವಗಡ

   ಯಾವುದೇ ಕ್ಷೇತ್ರಕ್ಕೆ ಬೇಕಾದರೂ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರಿಗೆ ತಮ್ಮದೆ ಗೌರವವಿದೆ ಎಂದು ಶಾಸಕ ವೆಂಕಟರವಣಪ್ಪ ತಿಳಿಸಿದರು.ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲ್ಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ 2ನೆ ರಾಷ್ಟ್ರಪತಿಗಳಾಗಿದ್ದ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.

   ಅವರ ಜನ್ಮ ದಿನವನ್ನು ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನಾಗಿ ಪ್ರತಿ ವರ್ಷ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ವರ್ಷ ಮಾತ್ರ ಕೊರೋನಾ ಸಾಂಕ್ರಾಮಿಕ ರೋಗದ ಭೀತಿಯಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನದಿಂದಾಗಿ ಶೋಕ ಆಚರಿಸುವುದರಿಂದ ಈ ಬಾರಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸುತ್ತಿದ್ದೇವೆ. ರಾಷ್ಟ್ರ ನಿರ್ಮಾಣ ಮತ್ತು ವ್ಯಕ್ತಿತ್ವ ರೂಪಿಸುವಲ್ಲಿ ಅವಿರತ ಶ್ರಮ ಪಡುತ್ತಿರುವ ಶಿಕ್ಷಕರ ಕೊಡುಗೆಯನ್ನು ನಾವು ನೆನೆಯುತ್ತೇವೆಂದರು.

    ಈ ವೇಳೆ 2019-20 ನೆ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇ. ನೂರಷ್ಠು ಫಲಿತಾಂಶ ಪಡೆದ 13 ಶಾಲೆಗಳಿಗೆ ಪ್ರಶಸ್ತಿ ಫಲಕ ಹಾಗೂ 8 ಶಾಲೆಗಳಿಗೆ ಇಲಾಖೆಯಿಂದ 25 ಸಾವಿರ ರೂ. ಮಗೌಲ್ಯದ ಚೆಕ್ ವಿತರಿಸಿ, 13 ಶಾಲೆಗಳಲ್ಲದೆ ಎಲ್ಲಾ ಪ್ರೌಢಶಾಲೆಗಳೂ ಶೇ. ನೂರರಷ್ಠು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದರು.

   ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಮಾತನಾಡಿ, ರಾಜ್ಯದಲ್ಲಿ 204 ಬ್ಲಾಕ್‍ಗಳ ಪೈಕಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಾವಗಡ 3ನೇ ಸ್ಥಾನ ಪಡೆದಿದೆ. ಇದಕ್ಕೆ ಶ್ರಮಿಸಿದ ಎಲ್ಲಾ ಶಿಕ್ಷಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು. ಉತ್ತಮ ಸಂಸ್ಕಾರಯುತ ವಿದ್ಯಾರ್ಥಿಗಳನ್ನು ಸಿದ್ದಗೊಳಿಸಿ ದೇಶದ ಅಭ್ಯುದಯಕ್ಕೆ ಅಡಿಪಾಯ ಹಾಕುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

   ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಮಾಳಮ್ಮ ಸುಬ್ಬರಾಯಪ್ಪ, ಗ್ರೇಡ್-2 ತಹಸೀಲ್ದಾರ್ ಸತ್ಯ ನಾರಾಯಣ, ರಂಗನಾಥ್, ಪವನ್ ಕುಮಾರ್ ರೆಡ್ಡಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ, ಶ್ರೀನಿವಾಸ್, ಫಕೃದ್ಧಿನ್, ಕರಿಯಣ್ಣ, ಬಸವರಾಜ್, ಹನುಮಂತರಾಯಪ್ಪ ಹಾಗೂ ತಾಲ್ಲೂಕಿನ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap