ಡಿ.1-2ರಂದು ನಾಟಕೋತ್ಸವ, ಸುಗಮ ಸಂಗೀತ

ದಾವಣಗೆರೆ:

         ಕರ್ನಾಟಕ ರಾಜ್ಯ ರಂಗಭೂಮಿ ಕಲಾವಿದರ ಒಕ್ಕೂಟದ ವತಿಯಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ.1 ಹಾಗೂ 2ರಂದು ಒಕ್ಕೂಟದ ವಾರ್ಷಿಕೋತ್ಸವ, ನಾಟಕೋತ್ಸವ, ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಒಕ್ಕೂಟದ ಚಿಂದೋಡಿ ಶಂಭುಲಿಂಗಪ್ಪ ತಿಳಿಸಿದರು.

         ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.1ರಂದು ಸಂಜೆ 6 ಗಂಟೆಗೆ ಸಾಣೇಹಳ್ಳಿಯ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಒಕ್ಕೂಟದ ಕೆ.ವೀರಯ್ಯ ಸ್ವಾಮಿ ವಹಿಸುವರು. ಮುಖ್ಯ ಅತಿಥಿಗಳಾಗಿ ಮೇಯರ್ ಶೋಭಾ ಪಲ್ಲಾಗಟ್ಟೆ, ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್, ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಂ.ಶಿವಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಒಕ್ಕೂಟದ ಕಲಾವಿದರು ಪಿ.ಬಿ.ದುತ್ತರಿಗಿ ರಚಿಸಿರುವ ಮುದುಕನ ಮದುವೆ ನಾಟಕವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರದರ್ಶಿಸಲಿದ್ದಾರೆಂದು ಮಾಹಿತಿ ನೀಡಿದರು.

         ಡಿ. 2ರಂದು ಸಂಜೆ 5 ಗಂಟೆಗೆ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಶಾಸಕ ಎಸ್.ಎ.ರವೀಂದ್ರನಾಥ್ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ . ಎ . ಹೆಚ್ . ಶಿವಯೋಗಿ ಸ್ವಾಮಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕಸಾಪ ಅಧ್ಯಕ್ಷ ಮಂಜುನಾಥ್ ಕುಕಿ, ವೃತ್ತ ನಿರೀಕ್ಷಕ ಉಮೇಶ್, ಟಿವಿ9 ವರದಿಗಾರ ಬಸವರಾಜ ದೊಡ್ಡಮನಿ ಆಗಮಿಸುವರು. ವೇದಿಕೆ ಕಾರ್ಯಕ್ರಮ ಬಳಿಕ 6.45ಕ್ಕೆ ಮಾರುತೇಶ್ ಮಾಂಡ್ರೆ ರಚನೆಯ ತವರು ಮನೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವೀರಯ್ಯಸ್ವಾಮಿ, ಹೆಚ್. ಮೆಹಬೂಬ್ ಅಲಿ, ಜ್ಯೋತಿಕಲಾ, ಅಹಮದ್ ಶರೀಫ್, ಸೌಮ್ಯ, ಶಂಭುಲಿಂಗಪ್ಪ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link