10 ಲಕ್ಷ ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಚಳ್ಳಕೆರೆ

       ಬೇಸಿಗೆಯ ಹಿನ್ನೆಲೆಯಲ್ಲಿ ಯಾವುದೇ ಪ್ರದೇಶದಲ್ಲೂ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸಲಾಗಿದೆ. ಈಗಾಗಲೇ ನಗರದ ಬಹುತೇಕ ಎಲ್ಲಾ ವಾರ್ಡ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದ್ದು, ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಲೋಕಸಭಾ ಸದಸ್ಯರ ನಿಧಿಯಲ್ಲಿ 10 ಲಕ್ಷ ಮೌಲ್ಯದ ಶುದ್ದ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

       ಅವರು, ಬುಧವಾರ ಇಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನೂತನ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ನಗರದ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಕುಡಿಯುವ ನೀರಿಗಾಗಿ ಅಲೆದಾಡುವ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಈ ಘಟಕವನ್ನು ಸ್ಥಾಪಿಸಲಾಗಿದೆ ಎಂದರು.

        ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ, ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುವಂತ ಕಾರ್ಯ ಮಾಡುವುದೆಂದರೆ ಹೆಚ್ಚು ಸಂತೋಷವಾಗುತ್ತದೆ. ಶಾಸಕರ ಮತ್ತು ಸಾರ್ವಜನಿಕರ ಮನವಿ ಮೇರೆಗೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ನಗರ ಹಾಗೂ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ವರ್ಗದ ಜನತೆಗೆ ಈ ಘಟಕದಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಿದಂತಾಗುತ್ತದೆ. ಜನಪರ ಕಾರ್ಯಗಳಿಗೆ ಸದಾಕಾಲ ಒತ್ತು ನೀಡುತ್ತೇನೆಂಬ ಭರವಸೆಯನ್ನು ನೀಡಿದರು.

        ಈ ಸಂದರ್ಭದಲ್ಲಿ ವೆಂಕಟೇಶ್‍ಗುಪ್ತ, ಅನ್ವರ್ ಮಾಸ್ಟರ್, ನಗರಸಭಾ ಸದಸ್ಯರಾದ ಆರ್.ಮಂಜುಳಾ, ಸುಮಾಭರಮಣ್ಣ, ಎಂ.ಸಾವಿತ್ರಿ, ಸುಮಕ್ಕ, ಆರ್.ರುದ್ರನಾಯಕ, ಎಸ್.ಸಿ.ವಿರೂಪಾಕ್ಷಿ, ರಮೇಶ್‍ಗೌಡ, ಎಂ.ಜೆ.ರಾಘವೇಂದ್ರ, ವೈ.ಪ್ರಕಾಶ್, ಜೈತುಂಬಿ, ಪೌರಾಯುಕ್ತ ಜೆ.ಟಿ.ಹನುಮಂತರಾಜು, ಎಸ್.ಎಚ್.ಸೈಯದ್, ಹನುಮಂತಪ್ಪ, ಆರ್.ಪ್ರಸನ್ನಕುಮಾರ್ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link