ಗುಬ್ಬಿ
ಕಳೆದ ಹಲವು ವರ್ಷಗಳಿಂದ ಸಮರ್ಪಕವಾಗಿ ಮಳೆ ಬಾರದೆ ಅಂತರ್ಜಲ ಕುಸಿತಗೊಂಡಿದ್ದು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಬೇಸಿಗೆ ಬಿಸಿಲು ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬಹುತೇಕ ಕೊಳವೆ ಬಾವಿಗಳು ಸಂಪೂರ್ಣವಾಗಿ ಬತ್ತುತ್ತಿವೆ ಬರುವ ಅಷ್ಟಿಷ್ಟು ನೀರನ್ನು ಹೊರತೆಗೆಯಲು ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ ತಾಲ್ಲೂಕಿನ ಗ್ರಾಮೀಣ ಭಾಗಗಲ್ಲಿ ಕುಡಿಯುವ ನೀರಿಗಾಗಿ 2300 ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು ಅಂತರ್ಜಲ ಕುಸಿತದಿಂದಾಗಿ ಶೇ 30 ರಷ್ಟು ಕೊಳವೆ ಬಾವಿಗಳಲ್ಲಿ ನೀರು ಬಾರದಂತಾಗಿದ್ದು ಗ್ರಾಮೀಣ ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುವುದು ಗ್ರಾಮ ಪಂಚಾಯ್ತಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ದೊಡ್ಡ ಸಮಸ್ಯೆಯಾಗಿದೆ.
ತಾಲ್ಲೂಕಿನ 12 ಗ್ರಾಮ ಪಂಚಾಯ್ತಿಗಳ 20ಕ್ಕೂ ಹೆಚ್ಚು ಗ್ರಾಮಗಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವೃವಾಗಿದ್ದು ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿರುವ 70 ಗ್ರಾಮಗಳಲ್ಲಿ ತ್ವರಿತವಾಗಿ ಕೊಳವೆ ಬಾವಿಗಳನ್ನು ಕೊರೆಸಲು ಬೇಡಿಕೆ ಬಂದಿರುವುದರಿಂದ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ವಿಭಾಗದ ಇಂಜಿನಿಯರ್ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ.
ಬೇಸಿಗೆ ಬಿಸಿಲು ಹೆಚ್ಚಾದಂತೆ ಅಂತರ್ಜಲ ಕುಸಿತದಿಂದಾಗಿ ಕೊಳವೆ ಬಾವಿಗಳಲ್ಲಿ ಬರುತ್ತಿದ್ದ ನೀರು ಸಂಪೂರ್ಣವಾಗಿ ನಿಂತು ಹೋಗುತ್ತಿದ್ದು ಗ್ರಾಮೀಣ ಜನತೆಗೆ ಸಮರ್ಪಕವಾದ ಕುಡಿಯುವ ನೀರು ಪೂರೈಕೆ ಮಾಡುವುದು ತೀವೃತರ ಸಮಸ್ಯೆಯಾಗಿ ಕಾಡುತ್ತಿದೆ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯ್ತಿಗಳು ಟ್ಯಾಂಕರ್‍ಗಳ ಮೊರೆ ಹೋಗಿದ್ದು ಗ್ರಾಮೀಣ ಜನತೆಗೆ ಯಾವುದೆ ರೀತಿಯ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿ ದ್ದಾರೆ
ಆದರೆ ತ್ವರಿತವಾಗಿ ಮಳೆ ಬಾರದೆ ಹೋದರೆ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಈಗಾಗಲೆ 1500 ಅಡಿಯವರೆಗೆ ಕೊರೆದರೂ ನೀರು ಸಿಗುತ್ತಿಲ್ಲ ಅಂತರ್ಜಲ ಸಂಪೂರ್ಣವಾಗಿ ಕುಸಿಯುತ್ತಿದೆ ಗ್ರಾಮೀಣ ಜನತೆ ಕುಡಿಯುವ ನೀರಿಗೆ ಪರದಾಡುವಂತಹ ಸಮಸ್ಯೆ ಎದುರಾಗಿದ್ದರೆ ಇನ್ನು ಜೀವನಾಧಾರವಾಗಿರುವ ಕೃಷಿ ಮತ್ತು ತೋಟದ ಬೆಳೆಗಳನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ. ತಮ್ಮನ್ನೆ ನಂಬಿರುವ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವನ್ನು ಒದಗಿಸುವದು ಹೇಗೆ ಎಂಬ ಸಮಸ್ಯೆ ಗ್ರಾಮೀಣ ಜನರನ್ನು ಕಾಡುತ್ತಿದೆ.
ಗ್ರಾಮೀಣ ಜನತೆಗೆ ಶುಧ್ದಕುಡಿಯುವ ನೀರನ್ನು ಒದಗಿಸಲು ಗ್ರಾಮಗಳಲ್ಲಿ ಶುಧ್ದಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿತ್ತು ಆದರೆ ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದಂತೆ ಬಹುತೇಕ ಗ್ರಾಮಗಳಲ್ಲಿನ ಶುಧ್ದಕುಡಿಯುವ ನೀರಿನ ಘಟಕಗಳಿಗೆ ಬೀಗ ಹಾಕಲಾಗಿದೆ. ಗ್ರಾಮೀಣ ಜನತೆ ಕುಡಿಯುವ ನೀರಿಗಾಗಿ ಇನ್ನಿಲ್ಲದ ಪರದಾಟ ನಡೆಸುತ್ತಿಸುತ್ತಿದ್ದಾರೆ ಕೊಡಹಿಡಿದು ತೋಟದ ಬಾವಿಗಳತ್ತ ಮುಖ ಮಾಡುತ್ತಿದ್ದಾರೆ ಕೆಲ ಗ್ರಾಮಗಳಲ್ಲಿ ಹಗಲಿರುಳೆನ್ನದೆ ಖಾಲಿ ಕೊಡ ಹಿಡಿದ ಮಹಿಳೆಯರು ಕುಡಿಯುವ ನೀರು ಸಂಗ್ರಹಿಸಲು ಟ್ಯಾಂಕರ್ ಮತ್ತು ತೋಟದ ಬಾವಿಗಳತ್ತ ಮುಖ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಗ್ರಾಮ ಪಂಚಾಯತಿಯಲ್ಲಿ ಮಾವಿನಹಳ್ಳಿ, ದೊಡ್ಡಗುಣಿ ಗ್ರಾಮ ಪಂಚಾಯತಿಯ ಕೊಂಡ್ಲಿಕ್ರಾಸ್, ತಗ್ಗೆಹಳ್ಳಿ, ಕಡಬ ಮತ್ತು ಕುನ್ನಾಲ ಗ್ರಾಮ ಪಂಚಾಯತಿಯ ದಾದುಭೈಪಾಳ್ಯ, ಬ್ಯಾಡರಮಲ್ಲೇನಹಳ್ಳಿ, ಕೊಪ್ಪ ಗ್ರಾಮ ಪಂಚಾಯ್ತಿಯ ಕೊಣೆಮಾದೇನಹಳ್ಳಿ, ನಾಗಸಂದ್ರ, ನೇರಳೆಕಟ್ಟೆಪಾಳ್ಯ, ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವೃವಾಗಿದೆ.
ಗ್ರಾಮಪಂಚಾಯತಿಗಳು ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದು ಈ ನೀರು ಸಾಕಾಗುತ್ತಿಲ್ಲ ಎನ್ನುತ್ತಾರೆ ಗ್ರಾಮೀಣ ಜನತೆ ಅಂತರ್ಜಲ ಕುಸಿತದ ಪರಿಣಾಮ ಕೊಳವೆ ಬಾವಿಗಲ್ಲಿ ಬರುತ್ತಿದ್ದ ಅಷ್ಟಿಷ್ಟು ನೀರು ನಿಂತು ಹೋಗುತ್ತಿದ್ದು ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಲ್ಲಿ ಕುಡಿಯುವ ನೀರಿಗೆ ಮತ್ತಷ್ಟು ತೀವೃತರ ಸಮಸ್ಯೆ ಎದುರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಸಂದೇಹವೆ ಇಲ್ಲ ಎನ್ನುತ್ತಾರೆ ಗ್ರಾಮೀಣ ಜನತೆ.
ಬೇಸಿಗೆ ಕಾಲ ಪ್ರಾರಂಭವಾದಾಗಿನಿಂದ ತಾಲ್ಲೂಕಿನ ಯಾವುದೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಮತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಆಯಾ ಗ್ರಾಮ ಪಂಚಾಯ್ತಿಗಳು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡುವಂತೆ ಸೂಕ್ತ ನಿರ್ಧೇಶನಗಳನ್ನು ನೀಡಲಾಗಿದೆ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿರುವುದಾಗಿ ಗ್ರಾಮೀಣ ನೀರು ಸರಬರಾಜು ವಿಭಾಗದ ಇಂಜಿನಿಯರ್ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ.
ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಕೊಡಲೆ ಗ್ರಾಮ ಪಂಚಾಯತಿ ವತಿಯಿಂದ ಟ್ಯಾಂಕರ್ ನೀಡುವ ಕೆಲಸವನ್ನು ಮಾಡಲಾಗುತ್ತಿದೆ ಒಂದು ಟ್ಯಾಕರ್‍ಗೆ 600 ರೂ ಹಣ ಗೊತ್ತು ಪಡಿಸಿದೆ ಅದರಿಂದ ಸಮಸ್ಯೆ ಬಗೆ ಹರಿಯದೆ ಹೋದಲ್ಲಿ ಹೋಬಳಿಗೂಬ್ಬರಂತೆ ಜಿಲ್ಲಾ ಮಟ್ಟದ ನೊಡಲ್ ಅಧಿಕಾರಿ ನೇಮಕ ಮಾಡಿದ್ದು ಅವರು ನೀಡುವ ವರದಿ ಆಧಾರದ ಮೇಲೆ ತ್ವರಿತವಾಗಿ ಟೆಂಡರ್ ಕರೆದು ಹೊಸದಾಗಿ ಕೊಳವೆಬಾವಿ ಕೊರೆಯಲು ಅನುಮತಿ ನೀಡಲಾಗುತ್ತದೆ ಎಂದು ಇಂಜಿನಿಯರ್ ತಿಳಿಸಿದ್ದಾರೆ.