ಚಾಲಕರು ಆರೋಗ್ಯದ ಕಡೆ ಗಮನಹರಿಸಬೇಕು

ಚಿತ್ರದುರ್ಗ:

     ಅಧಿಕಾರಿಗಳು ಸಕಾಲದಲ್ಲಿ ಕಾರ್ಯಕ್ರಮಕ್ಕೆ ಹಾಜರಾಗುವಲ್ಲಿ ಚಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ. ಸದಾ ಒತ್ತಡದಿಂದ ಕಾರ್ಯ ನಿರ್ವಹಿಸುವ ಚಾಲಕರು ಆರೋಗ್ಯದ ಕಡೆ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು.

     ಸರ್ಕಾರಿ ವಾಹನ ಚಾಲಕರ ಸಂಘ ಜಿಲ್ಲಾ ಶಾಖಾ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘2020 ನೇ ಸಾಲಿನ ನೂತನ ವರ್ಷದ ಡೈರಿ ಹಾಗೂ ಪಾಕೇಟ್ ಕ್ಯಾಲೆಂಡರ್ ಬಿಡುಗಡೆ ಸಮಾರಂಭ, ವಾರ್ಷಿಕ ಮಹಾಸಭೆ’ ಉದ್ಘಾಟಿಸಿ ಮಾತನಾಡಿದರು.

     ಚಾಲಕರು ಕುಟುಂಬಸ್ಥರ ಕಡೆಗೆ ಹೆಚ್ಚು ಆದ್ಯತೆ ನೀಡಬೇಕು. ಕಾಲ ಕಾಲಕ್ಕೆ ತಕ್ಕಂತೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದರ ಜೊತೆಗೆ ಮಕ್ಕಳ ಶಿಕ್ಷಣಕ್ಕೆ ವಿಶೇಷ ಗಮನಕೊಡಬೇಕು ಎಂಬುದಾಗಿ ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಚಾಲಕರಿಗೆ ಸಲಹೆ ನೀಡಿದರು.

     ಅಪರ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಚಾಲಕರು ಅವೀಸ್ಮರಣೀಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಕಳೆದ ತಿಂಗಳ ಹಿಂದೆ ಅನಾಥ ಮಕ್ಕಳಿಗೆ ದಿನನಿತ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಿ, ಮಾನವೀಯತೆ ಮೆರೆದಿದ್ದಾರೆ ಎಂದು ಅವರ ಕಾರ್ಯವೈಖರಿ ಕುರಿತು ಶ್ಲಾಘಿಸಿದರು. ಚಾಲಕರು ಸೃಜನಶೀಲರು ಹೆಚ್ಚಿನ ಪ್ರಮಾಣದಲ್ಲಿ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು.

       ಚಾಲಕರ ಕೆಲಸ ಒತ್ತಡದಿಂದ ಕೂಡಿದ್ದು, ಅಧಿಕಾರಿಗಳೊಂದಿಗೆ ಸದಾ ಜವಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಕೆಲವೇ ನಿಮಿಷಗಳು ತಡವಾದರೂ ಅಧಿಕಾರಿಗಳ ಕೋಪಕ್ಕೆ ಗುರಿಯಾದರೂ ತಾಳ್ಮೆಯಿಂದ ಜೋಪಾನವಾಗಿ ತಲುಪಬೇಕಾದ ಸ್ಥಳಕ್ಕೆ ತಲುಪಿಸುತ್ತಾರೆ. ಇದರ ಜೊತೆಗೆ ಕುಟುಂಬದ ಸಮಸ್ಯೆಗಳನ್ನು ಬದಿಗೊತ್ತಿ ಕೆಲಸ ನಿರ್ವಹಿಸುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

     ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದ ರಾಜ್ಯ ಘಟಕ ಅಧ್ಯಕ್ಷ ತಿಮ್ಮಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಎನ್. ಶ್ರೀನಿವಾಸ್, ಕಾರ್ಯದರ್ಶಿ ಚಲುವರಾಜ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳಾದ ಕನಕರಾಜ್, ಶಿವಪ್ಪ, ಜೆ. ಶಿವಾನಂದ, ವೆಂಕಟೇಶ್ ನಾಯಕ್, ಫಕಿರೇಶ್ ರೋಣ, ಎಂ.ಪಿ ಗೋಪಾಲ್, ಚಾಲಕರಾದ ವೇಣುಗೋಪಾಲ್, ಟಿ. ತಿಪ್ಪೇಸ್ವಾಮಿ, ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap