ಬೆಂಗಳೂರು
ಈ ರೀತಿ ಚಟುವಟಿಕೆಗಳು ನಡೆದಾಗ ಯಾರಿಗೂ ಗೊತ್ತಾಗುವುದಿಲ್ಲ. ಅಭ್ಯಾಸ ಇರುವವರಿಗೆ ಇದನ್ನು ಬಿಡುವುದು ಕಷ್ಟ. ಸಿನಿಮಾ ಇಂಡಸ್ಟ್ರಿ ಎಂದು ಟಾರ್ಗೆಟ್ ಮಾಡಬೇಡಿ. ಸಿನಿಮಾ ರಂಗದಲ್ಲಿ ಮಾತ್ರ ಅಲ್ಲ, ಎಲ್ಲಾ ರಂಗದಲ್ಲೂ ಡ್ರಗ್ಸ್ ಇದೆ ಎಂದು ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.
ವಿಧಾನ ಸೌಧದಲ್ಲಿ ದಸರಾ ಆಚರಣೆ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ನಾಯಕಿಯರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿನಿಮಾ ರಂಗದಲ್ಲಿ ಹೆಣ್ಣು ಮಕ್ಕಳೇ ಯಾಕೆ ಟಾರ್ಗೆಟ್ ಆಗ್ತಾರೆ ಅನ್ನೋ ವಿಚಾರಕ್ಕೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ. ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ವಿವಾದ ಮಾಡಬೇಕು ಎಂದು ನಾನು ಎಂದಿಗೂ ಮಾತನಾಡುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ಕೇಳಿ ಉತ್ತರಿಸುತ್ತಾರೆ ಎಂದಿದ್ದಾರೆ.
ನಾಗಮಂಗಲದಲ್ಲಿ ಡ್ರಗ್ಸ್ ಮಾರಾಟ ಆಗುತ್ತಿದೆ ಎಂಬ ಮಾಜಿ ಸಂಸದ ಶಿವರಾಮೇಗೌಡ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಮುಂದೆ ಸುಮ್ಮನೆ ಆರೋಪ ಮಾಡಬಾರದು. ದಾಖಲೆ ಇದ್ದರೆ ಪೊಲೀಸರಿಗೆ ಕೊಡಿ. ಸಾಕ್ಷಿ ಪುರಾವೆ ಸಹಿತ ಸಾಬೀತುಪಡಿಸಿ. ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಿ. ಅದನ್ನು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡಬೇಡಿ ಎಂದಿದ್ದಾರೆ.
ಸ್ಯಾಂಡಲ್ ವುಡ್ನಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದ್ದು, ಸಿಸಿಬಿ ಪೊಲೀಸರು ದಿನಕ್ಕೆ ಒಬ್ಬರಂತೆ ಪ್ರಮುಖ ನಟರನ್ನು ಬಂಧಿಸುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ ಈಗ ಐದು ದಿನ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ. ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈಗ ಡ್ರಗ್ ಪೆಡ್ಲರ್ ಆರೋಪ ಹೊತ್ತಿರುವ ವಿರೇನ್ ಖನ್ನ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದು ಸ್ಯಾಂಡಲ್ ವುಡ್ನಲ್ಲಿ ಸಂಚಲವನ್ನು ಸೃಷ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
