ಹೊಸಪೇಟೆ
ಉತ್ತರಪ್ರದೇಶದ ಹತ್ರಾಸ್‍ನಲ್ಲಿ ನಡೆದ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರ ಹಾಗೂ ಅಮಾನುಷ ಹತ್ಯೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲೂಕು ಪದಾಧಿಕಾರಿಗಳು ಸ್ಥಳೀಯ ತಹಸಿಲ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‍ರ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿಪತ್ರ ರವಾನಿಸಿದರು.
ಈ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಜತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಸಂತ್ರಸ್ತೆ ಸ್ವತಃ ಹೇಳಿಕೆ ದಾಖಲಿಸಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು. ಇಡೀ ಪ್ರಕರಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ದಸಂಸ ಪದಾಧಿಕಾರಿಗಳಾದ ಗ್ಯಾನಪ್ಪ ಬಡಿಗೇರ್, ತಿಪ್ಪಣ್ಣ ಆರತಿ, ಎ. ಚಿದಾನಂದ, ಓಂಕಾರೆಪ್ಪ, ಸುಶೀಲಮ್ಮ, ರೇಣುಕಾ ಆವೂಲ್ ಮತ್ತಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ