ಬೆಂಗಳೂರು
ಕೊರೊನಾ ಸೋಂಕು ತಗುಲುವ ಭೀತಿಯಲ್ಲಿರುವ ಸಾರ್ವಜನಿಕರನ್ನು ದುರುಪಯೋಗಪಡಿಸಿಕೊಂಡು ನಕಲಿ ಮಾಸ್ಕ್ ತಯಾರಿಸಿ ಮಾರಾಟ ಮಾಡುತ್ತಿದ್ದ ಗೋಡೌನ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 20 ಲಕ್ಷ ಮೌಲ್ಯದ ನಕಲಿ ಮಾಸ್ಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಲ್ಯಾಣ ನಗರದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿನ ದಿಸ್ ಇಂಜಿನಿಯರಿಂಗ್ ಡಯಾಬಿಟೀಸ್ ಸೆಂಟರ್ ಮೇಲೆ ದಾಳಿ ನಡೆಸಿ, 12,300 ನಕಲಿ ಎನ್-95 ಮಾಸ್ಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ದಾಳಿಯ ವೇಳೆ ಕೇರಳ ಮೂಲ ಅಸ್ಗರ್ (40)ನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಅಮೀರ್ ಹರ್ಷದ್‌ಗಿ ತೀವ್ರ ಶೋಧ ನಡೆಸಲಾಗಿದೆ ಎಂದರು.ಆರೋಪಿಗಳು ಈಗಾಗಲೇ 1 ಕೋಟಿ 5 ಲಕ್ಷ ಮೌಲ್ಯದ 70 ಸಾವಿರ ನಕಲಿ ಮಾಸ್ಕ್‌ಗಳನ್ನು ಮಾರಾಟ ಮಾಡಿರುವ ಮಾಹಿತಿ ನೀಡಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳು ನಕಲಿ ಎನ್-95 ಮಾಸ್ಕ್‌ಗಳನ್ನು ಕಳೆದೊಂದು ವಾರದಿಂದ ತಯಾರಿಸುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ನಕಲಿ ಮಾಸ್ಕ್‌ಗಳನ್ನೇ ನೈಜ ಮಾಸ್ಕ್‌ಗಳೆಂದು ನಂಬಿಸುವ ಸಲುವಾಗಿ ಎನ್-95 ಸೀಲ್‌ಗಳನ್ನು ಆರೋಪಿಗಳು ಬಳಸಿದ್ದಾರೆ. ಈ ರೀತಿ ಸಾರ್ವಜನಿಕರಿಗೆ ಮೋಸ ಮಾಡಿ ವ್ಯಾಪಾರ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ