ಬೆಳಗಾವಿ
ರಾಜ್ಯದಲ್ಲಿ ಡ್ರಗ್ ಮಾಫಿಯಾ ಅತ್ಯಂತ ಗಂಭೀರ ಸ್ವರೂಪ ಪಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಮಾದಕ ವಸ್ತು ಮಾರಾಟದ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಹಾಗೂ ಅಗತ್ಯಬಿದ್ದರೆ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿ ಎಂದು ಪೆÇಲೀಸರಿಗೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ.
ಕುಂದಾನಗರಿಯ ಶಹಾಪುರದಲ್ಲಿ 1.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಪೆÇಲೀಸ್ ಠಾಣೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾನೂನು ಅತ್ಯಂತ ಪ್ರಬಲವಾಗಿದ್ದರೂ, ಶಾಲೆ ಮತ್ತು ಕಾಲೇಜುಗಳ ಸಮೀಪ ಡ್ರಗ್ ಮಾಫಿಯಾ ನಡೆಯುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಹಾಗಾಗಿ, ಪೆÇಲೀಸರು ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈಗಾಗಲೇ ಹಲವು ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಪೊಲೀಸರಿಗೆ “ಪೊಲೀಸ್ ಗೃಹ” ಯೋಜನೆಯಡಿ 11 ಸಾವಿರ ವಸತಿ ಗೃಹಗಳನ್ನು ನಿರ್ಮಿಸಲು ಈಗಾಗಲೇ ಹಣ ಮುಂಜೂರು ಮಾಡಲಾಗಿದ್ದು, ಅದರಂತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪೊಲೀಸ್ ಇಲಾಖೆಯ ಎಲ್ಲ ಕುಟುಂಬಗಳಿಗೂ ವಸತಿ ಗೃಹ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಪ್ರಸ್ತುತ ಶೇ. 45ರಷ್ಟು ಕಾರ್ಯ ಸಾಧನೆಯಾಗಿದೆ ಎಂದು ತಿಳಿಸಿದರು.
ಪೆÇಲೀಸರು, ಜನಸ್ನೇಹಿಯಾಗಬೇಕು ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಸಚಿವರು ಸಲಹೆ ನೀಡಿದರು. ಆಧುನಿಕ ಮೂಲ ಸೌಲಭ್ಯಗಳನ್ನು ಒಳಗೊಂಡಂತೆ ನೂತನ ಪೊಲೀಸ್ ಠಾಣೆ ನಿರ್ಮಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/09/chicago-drugs-crime-defense-attorneys.gif)