ಬೆಂಗಳೂರು
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿರುವುದರಿಂದ ಬಹಳಷ್ಟು ಪದವೀಧರೇತರ ಮುಖ್ಯ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 120 ವಿದ್ಯಾರ್ಥಿಗಳ ಹಾಜರಾತಿ ಇದ್ದಲ್ಲಿ, ಪದವೀಧರೇತರ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡಬೇಕೆಂದು ಶಿಕ್ಷಕರು ಸರ್ಕಾರಕ್ಕೆ ಒತ್ತಾಯಿಸಿದರು.
ಕೆಜಿ ರಸ್ತೆಯ ಶಿಕ್ಷಕರ ಸದನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಆಯೋಜಿಸಿದ್ದ, ಪದಾಧಿಕಾರಿಗಳ ಶೈಕ್ಷಣಿಕ ಮತ್ತು ಆಡಳಿತ್ಮಾತ್ಮಕ ಕಾರ್ಯಾಗಾರದಲ್ಲಿ ಒತ್ತಾಯ ಮಾಡಿದರು.
ಅದೇ ರೀತಿ, ಪ್ರಾಥಮಿಕ ಶಾಲಾ ಶಿಕ್ಷಣ ಸಂಯೋಜಕರ ಹುದ್ದೆಗೆ ನೇಮಿಸುವಾಗ ಸೇವಾ ಹಿರಿತನವನ್ನು, ಪರಿಗಣಿಸಿ ಹಿಂದೆ ಇದ್ದ ಹಾಗೆಯೇ, ಪರೀಕ್ಷೆ ಇಲ್ಲದೆ, ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಶಿಕ್ಷಣ ಸಂಯೋಜಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಮನವಿ ಮಾಡಿದರು.
ಇನ್ನೂ, ರಾಜ್ಯ ವ್ಯಾಪ್ತಿಯಲ್ಲಿ ಪದವಿಧರೇತರ ಮುಖ್ಯೋಪಾಧ್ಯಾಯರ ಹುದ್ದೆಗಳು, 1,842 ರಷ್ಟು ಖಾಲಿ ಇದ್ದು, ಈ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸ ಬೇಕೆಂದು ಶಿಕ್ಷಕರು ಆಗ್ರಹಿಸಿದರು.
ಸರ್ಕಾರಿ ಸಹ ಶಿಕ್ಷಕರಿಗೆ, ಒಂದೇ ಹುದ್ದೆಯಲ್ಲಿ 30 ವರ್ಷ ಸೇವೆ ಸಲ್ಲಿಸಿದರೆ, ಅವರಿಗೆ ವಿಶೇಷ ಭತ್ಯೆ ನೀಡಲಾಗುತ್ತದೆ.ಅದೇ, ಮಾದರಿಯಲ್ಲಿ ಬಡ್ತಿ ಪಡೆದ ಮುಖ್ಯ ಶಿಕ್ಷಕರಿಗೂ ನೀಡಬೇಕು. ಇನ್ನೂ, 30 ದಿನ ಗಳಿಕೆ ರಜೆ ಅನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ನಿರ್ದೇಶಕ ಎಸ್.ಜಯಕುಮಾರ್, ಸಂಘದ ಅಧ್ಯಕ್ಷ ಕೆ.ಕೃಷ್ಣಪ್ಪ, ನಿವೃತ್ತ ಶಿಕ್ಷಣಾಧಿಕಾರಿ ಕೆ.ಪಿ.ಹನುಮಂತರಾಯಪ್ಪ, ಕೆ.ಎನ್.ನಂಜಪ್ಪ ಗೌಡ ಸೇರಿದಂತೆ ಪ್ರಮುಖರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
