ದಾವಣಗೆರೆ:
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಶಾಖೆ ಹಾಗೂ ದಾವಣಗೆರೆ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಇವುಗಳ ಸಹಯೋಗದಲ್ಲಿ ನಾಳೆ (ಡಿ.6ರಂದು) ನಗರದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ಉದ್ಘಾಟಿಸುವರು. ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಹಾಗೂ ಪ್ರಾಚಾರ್ಯ ಡಾ.ದಾದಾಪೀರ್ ನವಿಲೇಹಾಳ್ ವಿಶೇಷ ಉಪನ್ಯಾಸ ನೀಡುವರು. ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ್ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಜಿ.ಕರುಣಾಕರ ರೆಡ್ಡಿ, ಎಸ್.ವಿ.ರಾಮಚಂದ್ರಪ್ಪ, ಪ್ರೊ.ಎನ್.ಲಿಂಗಣ್ಣ, ಮಾಡಾಳು ವಿರೂಪಾಕ್ಷಪ್ಪ, ಕೆ.ಅಬ್ದುಲ್ ಜಬ್ಬಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಹೆಚ್.ಕೆ.ಶೇಖರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಎ.ಹೆಚ್.ನಿಂಗೇಗೌಡ, ಕಾರ್ಯಾಧ್ಯಕ್ಷ ಎಸ್.ಆರ್.ವೆಂಕಟೇಶ್, ಕೋಶಾಧ್ಯಕ್ಷ ಎಂ.ಜಯಣ್ಣ, ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ನೌಕರರ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಿಬಸಪ್ಪ, ಹೆಚ್.ಎಸ್.ರಂಗಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಎಸ್.ಹಾಲೇಶಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಮಾವೇಶದ ಮೂಲಕ ಗುರುಭವನದ ಮಾದರಿಯಲ್ಲಿ ಪದವಿ ಪೂರ್ವ ಶಿಕ್ಷಣದ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲು ಉಪನ್ಯಾಸಕರ ಭವನ ನಿರ್ಮಿಸಿಕೊಡಬೆಕು. ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ವೇತನಕ್ಕೆ ಸಂಬಂಧಿಸಿದಂತೆ ಕುಮಾರ ನಾಯಕ್ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಪ್ರೌಢ ಶಾಲೆಗಳಿಂದ ಪದವಿ ಪೂರ್ವ ಕಾಲೇಜುಗಳಿಗೆ ಬಡ್ತಿ ಹೊಂದಿರುವ ಉಪನ್ಯಾಸಕರಿಗೆ ಪ್ರೌಢಶಾಲೆಯಲ್ಲಿ ಸೇವೆ ಆರಂಭಿಸಿದಾಗಿನಿಂದ ಕಾಲಮಿತಿ ವೇತನ ಬಡ್ತಿಯನ್ನು ಮಂಜೂರು ಮಾಡಿಕೊಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಶಾಖೆ ಖಜಾಂಚಿ ಡಾ.ಜುಲ್ಕರ್‍ನೈನ್ ಭಾಷಾ, ಉಪಾಧ್ಯಕ್ಷರುಗಳಾದ ತಿಪ್ಪೇಸ್ವಾಮಿ ಕಾತ್ರಿಕೆಹಟ್ಟಿ, ಹೆಚ್.ಶೇಖರಪ್ಪ, ಎಂ.ಎಫ್. ಹಿತ್ತಲಮನಿ ಮತ್ತಿತರರು ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ